– 8ನೇ ತರಗತಿ ಮಕ್ಕಳಿಗೆ ಮತ್ತೆ ಸೈಕಲ್ ವಿತರಣೆಗೆ ಶಾಸಕ ಒತ್ತಾಯ
ಬೆಳಗಾವಿ: ಶಾಲಾ ಮಕ್ಕಳಿಗೆ (School Students) ಎರಡು ಜೊತೆ ಬದಲು ನಾಲ್ಕು ಜೊತೆ ಶೂ (Shoe), ಸಾಕ್ಸ್ (Socks) ಕೊಡುವಂತೆ ಚಿಕ್ಕಬಳ್ಳಾಪುರ (Chikkaballapura) ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಆಗ್ರಹಿಸಿದ್ದಾರೆ.
Advertisement
ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಎಂಟನೇ ತರಗತಿ ಮಕ್ಕಳಿಗೆ ಮತ್ತೆ ಸೈಕಲ್ (Cycle) ವಿತರಣೆ ಮಾಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ಮುಂದಿನ ಬಜೆಟ್‌ನಲ್ಲಿ ಸೈಕಲ್ ವಿತರಣೆಗೆ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದು, ಸಿಎಂ ಹಾಗೂ ಆರ್ಥಿಕ ಇಲಾಖೆ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಇದನ್ನೂ ಓದಿ: ಶೋಭಾ ಕರಂದ್ಲಾಜೆ ಸೇರಿ ನಾಲ್ವರು ಕೇಂದ್ರ ಸಚಿವರಿಗೆ ಹೆಚ್ಚುವರಿ ಖಾತೆಗಳ ಉಸ್ತುವಾರಿ
Advertisement
Advertisement
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ (Madhu Bangarappa), ಇದರ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದರು. ಈ ವೇಳೆ ವಿಪಕ್ಷ ನಾಯಕ ಆರ್.ಅಶೋಕ್ (R Ashok) ಮಧ್ಯ ಪ್ರವೇಶಿಸಿ, ಇಡೀ ರಾಜ್ಯದಲ್ಲಿ ಸೈಕಲ್ ವಿತರಣೆ ಪುನರಾರಂಭಿಸಿ. ಯಡಿಯೂರಪ್ಪ ತಂದಿರುವ ಯೋಜನೆ ಅದು. ದೂರದಿಂದ ಬರುವ ಮಕ್ಕಳಿಗೆ ಸಹಾಯ ಆಗುತ್ತದೆ ಎನ್ನುವ ಮೂಲಕ ಪ್ರದೀಪ್ ಈಶ್ವರ್ ಬೆಂಬಲಕ್ಕೆ ನಿಂತರು. ಇದನ್ನೂ ಓದಿ: ಆರ್‌ಎಸ್‌ಎಸ್‌ನಲ್ಲಿ ಜಾತಿ ಕೇಳಿ ಒಳಬಿಡುವ ಪದ್ಧತಿಯಿಲ್ಲ: ರಾಜಕುಮಾರ್
Advertisement
ಇದಕ್ಕೆ ಉತ್ತರಿಸಿದ ಮಧು ಬಂಗಾರಪ್ಪ, ಸೈಕಲ್ ವಿತರಣೆ ನಿಮ್ಮ ಕಾಲದಲ್ಲೇ ಸ್ಥಗಿತ ಆಯಿತು. ನಿಮ್ಮವರೇ ಆರಂಭಿಸಿ ನಿಮ್ಮ ಕಾಲದಲ್ಲೇ ಸ್ಥಗಿತ ಆಯಿತು. ಹೀಗಾಗಬಾರದಿತ್ತು. ಈಗ ನಮ್ಮ ಸರ್ಕಾರ ಸೈಕಲ್ ವಿತರಣೆಗೆ ಪರಿಶೀಲಿಸಿ ಕ್ರಮ ವಹಿಸಲಿದೆ ಎಂದು ಅಶೋಕ್‌ಗೆ ಟಾಂಗ್ ಕೊಟ್ಟರು. ಇದನ್ನೂ ಓದಿ: ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ತಿಂಗಳಲ್ಲಿ ಖಾತಾ: ಉದ್ಯಮಿಗಳ ನಿಯೋಗಕ್ಕೆ ಎಂ.ಬಿ.ಪಾಟೀಲ್ ಭರವಸೆ