ಬೆಂಗಳೂರು: ಬಿಬಿಎಂಪಿ ಚುನಾವಣೆ ಮತ್ತು ಲೋಕಸಭೆ ಚುನಾವಣೆ ಹತ್ತಿರ ಬರುತ್ತಲೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಿಜೆಪಿ (BJP) ಟಾರ್ಗೆಟ್ ಮಾಡಲು ಮುಂದಾಗಿದ್ದಾರೆ. ಬಿಜೆಪಿ ಅವಧಿಯಲ್ಲಿನ ಬಿಬಿಎಂಪಿ (BBMP) ಎಲ್ಲಾ ಟೆಂಡರ್, ಕಾಮಗಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ.
Advertisement
2019 ರಿಂದ 2023 ರವರೆಗೆ ಬಿಬಿಎಂಪಿಯಲ್ಲಿ ನಡೆದ ಟೆಂಡರ್ಗಳು, ಕಾಮಗಾರಿಗಳು, ಕಾಮಗಾರಿಗೆ ಬಿಡುಗಡೆಯಾದ ಅನುದಾನದ ಸಂಪೂರ್ಣ ಮಾಹಿತಿ ನೀಡುವಂತೆ ಬೆಂಗಳೂರು ಅಭಿವೃದ್ಧಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ದೇಶಾದ್ಯಂತ 508 ರೈಲ್ವೆ ನಿಲ್ದಾಣ ಪುನರಾಭಿವೃದ್ಧಿಗೆ ಮೋದಿ ಚಾಲನೆ
Advertisement
Advertisement
ಪ್ರತಿ ಕಾಮಗಾರಿಯಲ್ಲಿ 15 ಅಂಶಗಳ ಒಳಗೊಂಡ ಪ್ರಶ್ನೆಗೆ ಉತ್ತರ ಸಹಿತ ಮಾಹಿತಿ ನೀಡುವಂತೆ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಹಾಗಾದರೆ ಚುನಾವಣೆ ಸಮಯದಲ್ಲಿ ಬಿಜೆಪಿಯನ್ನು ಕಟ್ಟಿ ಹಾಕುವ ತಂತ್ರನಾ? ಬಿಜೆಪಿ ಭ್ರಷ್ಟಾಚಾರ ಬಯಲಿಗೆ ಎಳೆಯುತ್ತಾರಾ? ಬಿಜೆಪಿ ಅವಧಿಯಲ್ಲಿ ಬಿಬಿಎಂಪಿಯಲ್ಲಿ ದೊಡ್ಡ ಅಕ್ರಮ ಆಗಿದೆಯಾ? ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ತನಿಖೆ ಮಾಡಿಸುತ್ತಾರಾ ಎಂಬ ಪ್ರಶ್ನೆಗಳು ಮೂಡಿವೆ. ಇದನ್ನೂ ಓದಿ: ನರೇಂದ್ರ ಮೋದಿ ಸರ್ಕಾರ ಸ್ವರ್ಗ ತೋರಿಸ್ತೀನಿ ಅಂತ ಜನರಿಗೆ ನರಕ ತೋರಿಸಿದ್ದಾರೆ: ಸಲೀಂ ಅಹಮದ್
Advertisement
Web Stories