ಹಾಸನ: ಮದ್ಯಪಾನ ಮಾಡುವವರಿಗೆ ಸರ್ಕಾರ ಸವಲತ್ತುಗಳನ್ನು ಒದಗಿಸುವಂತೆ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ (Habitual Drinkers Association) ಅಧ್ಯಕ್ಷ ವೆಂಕಟೇಶ್ ಒತ್ತಾಯಿಸಿದ್ದಾರೆ.
ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ಯ ಕುಡಿಯುವವರನ್ನು ಯಾರೂ ಕೂಡ ಕುಡುಕರು ಎನ್ನಬಾರದು. ಮದ್ಯಪ್ರಿಯರು ಎಂದು ಕರೆಯಬೇಕು. ಮದ್ಯಪಾನ ಪ್ರಿಯರಿಗೆ 1 ಲಕ್ಷ ಇನ್ಷೂರೆನ್ಸ್ ಸೌಲಭ್ಯ ಒದಗಿಸಬೇಕು. ಮದ್ಯ ಕುಡಿದು ಸಾವನ್ನಪ್ಪಿದರೆ ಆ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಫೆಬ್ರವರಿಯಲ್ಲಿ ಬಜೆಟ್ ಮಂಡನೆ: ಬೊಮ್ಮಾಯಿ
Advertisement
Advertisement
ಮದ್ಯಪ್ರಿಯರಿಗೆ ಎರಡು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಬೇಕು. ಕುಡಿದು ಹೆಚ್ಚಾಗಿ ಬಾರ್‌ನಲ್ಲಿ ಮಲಗಿದರೆ ಅವರನ್ನು ಆಚೆ ಕಳುಹಿಸಬಾರದು. ನಾಲ್ಕು ಗಂಟೆ ಅಲ್ಲೇ ವಿಶ್ರಾಂತಿ ಪಡೆಯಲು ವೈನ್ ಸ್ಟೋರ್‌ಗಳಲ್ಲಿ ಬೆಡ್ ವ್ಯವಸ್ಥೆ ಕಲ್ಪಿಸಿಕೊಡಬೇಕು. ಮದ್ಯಪಾನ ನಿಗಮ ಮಂಡಳಿ ರಚಿಸಬೇಕು. ಮದ್ಯಪಾನ ಪ್ರಿಯರಿಗೆ ನಿವೇಶನ ನೀಡುವುದು ಸೇರಿದಂತೆ ಹದಿನೆಂಟು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ.
Advertisement
ಸರ್ಕಾರಕ್ಕೆ ನಮ್ಮಿಂದಲೇ ಶೇ.30 ಆದಾಯ ಬರುತ್ತಿದೆ. ಮದ್ಯ ಪ್ರಿಯರು ಕುಡಿದು ಮನೆಗೆ ಹೋಗಿ ಗಲಾಟೆ ಮಾಡಿದರೆ ಮಕ್ಕಳ ಓದಿಗೆ ತೊಂದರೆ ಆಗುತ್ತದೆ. ಹೀಗಾಗಿ ಕುಡುಕರ ಮಕ್ಕಳಿಗೆ ಹಾಸ್ಟೆಲ್‌ಗಳಲ್ಲಿ ಶೇ.10ರಷ್ಟು ಮೀಸಲಿಡಬೇಕು. ಕುಡಿತದಿಂದ ಎದುರಾಗುವ ಆರೋಗ್ಯ ಸಮಸ್ಯೆ ಹಾಗೂ ಕಿಡ್ನಿ, ಲಿವರ್ ತೊಂದರೆಯಿಂದ ಬಳಲುವವರಿಗೆ ಸರ್ಕಾರವೇ 4ರಿಂದ 5 ಲಕ್ಷ ವೈದ್ಯಕೀಯ ವೆಚ್ಚ ಭರಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: ಹಳೇ ಮೈಸೂರು ಭಾಗದ ಮೇಲೆ ಕಣ್ಣು- ಡಿ.30ಕ್ಕೆ ಮಂಡ್ಯದಲ್ಲಿ ಅಮಿತ್ ಶಾ ಸಮಾವೇಶ
Advertisement
ಶೀಘ್ರದಲ್ಲಿಯೇ ಅಧಿಕೃತವಾಗಿ ಮದ್ಯಪಾನ ಪ್ರಿಯರ ಹೋರಾಟ ಸಂಘದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ರಮದಲ್ಲಿ ಅಬಕಾರಿ ಸಚಿವರು ಸೇರಿದಂತೆ ಏಳೆಂಟು ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.