ನವದೆಹಲಿ: ಕೇಂದ್ರ ಸರ್ಕಾರವು ಜನಸಾಮಾನ್ಯರಿಗಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ. ಬಿಜೆಪಿಯೇತರ ಆಡಳಿತವಿರುವ ಜನತೆ ಹೆಚ್ಚಿನ ಪ್ರಮಾಣದಲ್ಲಿ ಈ ಯೋಜನೆ ಲಾಭ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಂಸದರು ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಸಲಹೆ ನೀಡಿದ್ದಾರೆ.
ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಮತ್ತು ಲಕ್ಷದ್ವೀಪದ 48 ಸಂಸದರೊಂದಿಗೆ ಪ್ರಧಾನಿ ಮೋದಿ ಬುಧವಾರ ಕ್ಲಸ್ಟರ್-4 ಸಭೆ ನಡೆಸಿದರು. ಸಭೆ ಸುಮಾರು ಒಂದು ಗಂಟೆಗಳ ಕಾಲ ನಡೆಯಿತು. ಇದನ್ನೂ ಓದಿ: ಕರ್ನಾಟಕದಲ್ಲಿ 25 ಲೋಕಸಭೆ ಸ್ಥಾನ ಗೆಲ್ಲಬೇಕು- ಕೈ ನಾಯಕರಿಗೆ ಹೈಕಮಾಂಡ್ ಬಿಗ್ ಟಾಸ್ಕ್
Advertisement
Advertisement
ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಂತಹ ಬಿಜೆಪಿಯೇತರ ರಾಜ್ಯಗಳ ಜನರೊಂದಿಗೆ ಸಂಪರ್ಕ ಸಾಧಿಸಲು ಹೆಚ್ಚು ಗಮನಹರಿಸಿ. ಎಲ್ಲಾ ಧಾರ್ಮಿಕ ಹಬ್ಬಗಳನ್ನು ಸಾರ್ವಜನಿಕರೊಂದಿಗೆ ಆಚರಿಸಿ ಮತ್ತು ಒಗ್ಗಟ್ಟಾಗಿರಿ. ಮುಂಬರುವ 2024 ರ ಲೋಕಸಭಾ ಚುನಾವಣೆಗೆ (Lok Sabha Election) ಎಲ್ಲರೂ ಸಿದ್ಧರಾಗಿ ಎಂದು ಸಂಸದರಿಗೆ ತಿಳಿಸಿದ್ದಾರೆ.
Advertisement
ಸಭೆಯಲ್ಲಿ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಆತಿಥೇಯ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ವಿ. ಮುರಳೀಧರನ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ಡಾ.ಕೆ.ಲಕ್ಷ್ಮಣ್, ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ, ವನತಿ ಶ್ರೀನಿವಾಸನ್ ಮತ್ತು ಇತರ ಎನ್‌ಡಿಎ ಸಂಸದರು ಸಭೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಫಾಕ್ಸ್‌ಕಾನ್‌ನಿಂದ ರಾಜ್ಯದಲ್ಲಿ 5,000 ಕೋಟಿ ರೂ. ಹೂಡಿಕೆ- 13,000 ಉದ್ಯೋಗ ಸೃಷ್ಟಿ
Advertisement
2024 ರ ಲೋಕಸಭೆ ಚುನಾವಣೆಗೆ ಬಿಜೆಪಿಯ ಸಿದ್ಧತೆಗಳ ಭಾಗವಾಗಿ ಸೋಮವಾರ ಪಿಎಂ ಮೋದಿ ಉತ್ತರ ಪ್ರದೇಶ, ಬುಂದೇಲ್‌ಖಂಡ್ ಮತ್ತು ಬ್ರಜ್ ಪ್ರದೇಶದ ಎನ್‌ಡಿಎ ಸಂಸದರೊಂದಿಗೆ ಸಭೆ ನಡೆಸಿದ್ದರು. ತಳಮಟ್ಟದಲ್ಲಿ ಪ್ರಭಾವ ಬೀರುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ ಎಂದು ಕಿವಿಮಾತು ಹೇಳಿದ್ದಾರೆ.
Web Stories