ಕನ್ನಡವೂ ಸೇರಿದಂತೆ ಹಲವಾರು ಭಾಷೆಗಳಲ್ಲಿ ನಟಿಸಿರುವ ಆಶಿಷ್ ವಿದ್ಯಾರ್ಥಿ (Ashish Vidyarthi) ತಮಗೆ ಅವಕಾಶ ನೀಡುತ್ತಿಲ್ಲವೆಂದು ಅಳಲು ಹೇಳಿಕೊಂಡಿದ್ದಾರೆ. ತಾವು ಹಲವಾರು ಭಾಷೆಗಳಲ್ಲಿ ನಟಿಸಿದ್ದರೂ, ವಿವಿಧ ಪಾತ್ರಗಳನ್ನು ಮಾಡಿದ್ದರೂ, ತಮ್ಮನ್ನು ಚಿತ್ರೋದ್ಯಮ ಮರೆತಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ನನ್ನನ್ನು ಎಲ್ಲರೂ ವಿಲನ್ (Villain) ರೀತಿಯಲ್ಲಿ ನೋಡುತ್ತಿದ್ದಾರೆ. ನಾನು ಸಾಕಷ್ಟು ಪಾತ್ರಗಳಲ್ಲಿ ನಟಿಸಿದ್ದೇನೆ. ಬೇರೆ ಬೇರೆ ಪಾತ್ರಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಅವೆಲ್ಲವನ್ನೂ ಜನರು ಮತ್ತು ಉದ್ಯಮ ಮೆಚ್ಚಿಕೊಂಡಿದೆ. ಆದರೂ, ನನಗೆ ಕೆಲಸ ಕೊಡುತ್ತಿಲ್ಲ. ದಯವಿಟ್ಟು ಅವಕಾಶ ನೀಡಿ ಎಂದು ಅವರು ಕೇಳಿಕೊಂಡಿದ್ದಾರೆ.
ಆಶಿಷ್ ವಿದ್ಯಾರ್ಥಿ ಇತ್ತೀಚೆಗಷ್ಟೇ 2ನೇ ಮದುವೆ ಆಗಿದ್ದರು. ಮದುವೆ ನಂತರ ಬಂದ ಟೀಕೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು. ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ತಮಗೆ ಅವಕಾಶ ಸಿಗುತ್ತಿಲ್ಲವೆಂದು ಅವರು ಅಳಲು ತೋಡಿಕೊಂಡಿದ್ದಾರೆ.