ಭಾರತ ಸರಕಾರಕ್ಕೆ (Central Government) ಮತ್ತು ಶಿಕ್ಷಣ ಇಲಾಖೆಗೆ ಅತ್ಯಂತ ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ ಬಾಲಿವುಡ್ ನಟಿ ಕಂಗನಾ ರಣಾವತ್. ಯಾವ ಶತ್ರು, ಯಾವಾಗ ದೇಶದ ಮೇಲೆ ಆಕ್ರಮಣ ಮಾಡುತ್ತಾನೋ ಗೊತ್ತಿಲ್ಲ. ದೇಶವನ್ನು ರಕ್ಷಣೆ ಮಾಡುವ ಹಿತದೃಷ್ಟಿಯಿಂದ ಪದವಿ ಮುಗಿಯುತ್ತಿದ್ದಂತೆಯೇ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಮಿಲ್ಟ್ರಿ (Military)ತರಬೇತಿ ಕೊಡುವಂತೆ ಕಂಗನಾ ಸಲಹೆ ನೀಡಿದ್ದಾರೆ.
Advertisement
ಕಂಗನಾ ಅವರ ಸಲಹೆಗೆ ನೆಟ್ಟಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಯೊಬ್ಬರ ಹೃದಯದಲ್ಲೂ ಇದು ದೇಶ ಭಕ್ತಿ ತುಂಬಲಿದೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ. ಕಂಗನಾ ಅವರ ದೇಶಭಕ್ತಿಯ ಬಗ್ಗೆ ಕೊಂಡಾಡಿದ್ದಾರೆ. ಈ ಸಲಹೆಯನ್ನು ಕೇಂದ್ರ ಸರಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹಲವರು ರಿಯ್ಯಾಕ್ಟ್ ಮಾಡಿದ್ದಾರೆ.
Advertisement
Advertisement
ಇದರ ಜೊತೆಗೆ ಕಂಗನಾ ರಣಾವತ್ (Kangana Ranaut)ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಮಹದೇವ್ ಬೆಟ್ಟಿಂಗ್ ಆಪ್ ಮಾಲೀಕರ ಮದುವೆಯಲ್ಲಿ ಪಾಲ್ಗೊಂಡಿರುವ ಮತ್ತು ಆ ಆಪ್ ಗೆ ಪ್ರಮೋಟ್ ಮಾಡಿದವರ ವಿರುದ್ಧ ಇಡಿ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಕರೆಯುತ್ತಿದೆ. ಈ ಕುರಿತು ಕಂಗನಾ ಮಾತನಾಡಿದ್ದಾರೆ. ಈ ಬೆಟ್ಟಿಂಗ್ ಆಪ್ ನವರು ನನ್ನನ್ನೂ ಅದರ ಭಾಗವಾಗುವಂತೆ ಕೇಳಿದ್ದರು. ನಾನು ಹೋಗಲಿಲ್ಲ ಎಂದಿದ್ದಾರೆ ಕಂಗನಾ.
Advertisement
ಖ್ಯಾತ ನಟ ರಣಬೀರ್ ಕಪೂರ್, ಹಾಸ್ಯ ನಿರೂಪಕ ಕಪಿಲ್ ಶರ್ಮಾ (Kapil Sharma) ಸೇರಿದಂತೆ ಬಿಟೌನ್‍ನ ಒಟ್ಟು 34 ಸೆಲೆಬ್ರಿಟಿಗಳಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದೆ. ಮಹದೇವ್ ಆನ್ ಲೈನ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ (Notice) ಜಾರಿ ಮಾಡಿದ್ದು, ಮೊನ್ನೆಯಿಂದಲೇ ಹಲವರಿಗೆ ವಿಚಾರಣೆಗೆ ಕರೆದಿದೆ.
Web Stories