ನಾಳೆ ಬೆಳಗ್ಗೆ 11.46ಕ್ಕೆ ಕಿಚ್ಚನ ಹೊಸ ಸಿನಿಮಾದ ಗ್ಲಿಂಪ್ಸ್ ರಿಲೀಸ್

Public TV
2 Min Read
Sudeep 6

ಕಿಚ್ಚನ (Kiccha) ಅಭಿಮಾನಿಗಳಿಗೆ ನಾಳೆ ಹಬ್ಬವೋ ಹಬ್ಬ. ಅದೆಷ್ಟೋ ತಿಂಗಳುಗಳಿಂದ ಕಾಯುತ್ತಿದ್ದ ಕ್ಷಣ ನಾಳೆ ಬೆಳಗ್ಗೆ 11.46ಕ್ಕೆ ಮೊಟ್ಟೆಯೊಡೆದು ರೆಕ್ಕೆ ಬಿಚ್ಚಿ ಹಾರಲಿದೆ. ಅಂದರೆ, ಸುದೀಪ್ ನಟನೆಯ 46ನೇ ಸಿನಿಮಾದ ಗ್ಲಿಂಪ್ಸ್ (Glimpse) ರಿಲೀಸ್ ಆಗುವುದರ ಜೊತೆಗೆ ಆ ಹೊಸ ಸಿನಿಮಾದ ಸಾಕಷ್ಟು ವಿಷಯಗಳು ಅಭಿಮಾನಿಗಳಿಗೆ ಸಿಗಲಿವೆ.

sudeep

ಸುದೀಪ್ (Sudeep) ನಟನೆಯ ಈ ಹೊಸ ಸಿನಿಮಾಗೆ ತಮಿಳಿನ ಹೊಸ ಹುಡುಗ ವಿಜಯ್ ಕಾರ್ತಿಕೇಯ (Vijay Karthikeya) ಎನ್ನುವವರು ನಿರ್ದೇಶನ ಮಾಡಲಿದ್ದು, ಇದು ವಿಜಯ್ ಅವರ ಎರಡನೇ ಸಿನಿಮಾವಾಗಿದ್ದರೂ, ಮೊದಲ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ ಎನ್ನುವ ಮಾಹಿತಿ ಇದೆ. ಹಾಗಾಗಿ ಇದು ವಿಜಯ್ ಅವರ ಫಸ್ಟ್ ಸಿನಿಮಾ ಎಂದು ಹೇಳಲಾಗುತ್ತಿದೆ.

sudeep bigg boss

ಈಗಾಗಲೇ ತಿಳಿದಿರುವಂತೆ ಕಿಚ್ಚ ಸುದೀಪ್​ ಅವರು ಮೂರು ಸಿನಿಮಾಗಳಿಗೆ ಗ್ರೀನ್​ ಸಿಗ್ನಲ್​ ನೀಡಿದ್ದಾರೆ. ಆ ಪೈಕಿ ‘ವಿ ಕ್ರಿಯೇಷನ್ಸ್​’ನ ಕಲೈಪುಲಿ ಎಸ್​. ಧಾನು (Kalaipuli S. Dhanu) ಅವರು ನಿರ್ಮಾಣ ಮಾಡುತ್ತಿರುವ ಸಿನಿಮಾ ಮೊದಲು ಸೆಟ್ಟೇರಿದೆ. ಕೆಲವೇ ದಿನಗಳ ಹಿಂದೆ ಅವರು ಪ್ರೋಮೋ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು ಸುದೀಪ್. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ 30 ಸೆಕೆಂಡ್ ಲಿಪ್ ಲಾಕ್: ಕಣ್ಮುಚ್ಚಿಕೊಂಡ ಪೂಜಾ ಭಟ್

sudeep 1 4

ಕಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ವಿ ಕ್ರಿಯೇಷನ್ಸ್​’ ಜೊತೆ ಕಿಚ್ಚ ಸುದೀಪ್ ​ ಅವರು ಕೈ ಜೋಡಿಸಿದ್ದು, ಅದ್ದೂರಿ ಬಜೆಟ್​ನಲ್ಲಿ ‘ಕಿಚ್ಚ 46’ ಚಿತ್ರ ನಿರ್ಮಾಣ ಆಗುತ್ತಿದೆ. ‘ಕಬಾಲಿ’, ‘ತುಪಾಕಿ’, ‘ಅಸುರನ್​’ ಮುಂತಾದ ದೊಡ್ಡ ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ಕಲೈಪುಲಿ ಎಸ್​. ಧಾನು ಅವರಿಗೆ ಇದೆ.

 

ಡಾರ್ಲಿಂಗ್ ಕೃಷ್ಣ, ನವೀನ್ ಶಂಕರ್, ಕಾಂತಾರ ನಟಿ ಸಪ್ತಮಿ ಗೌಡ, ವಾಸುಕಿ ವೈಭವ್, ಅನುಪ್ ಭಂಡಾರಿ, ವಿನಯ್ ರಾಜ್‌ಕುಮಾರ್ ಮತ್ತು ಡಾಲಿ ಧನಂಜಯ ಮುಂತಾದ ಕನ್ನಡದ ಪ್ರಮುಖ ಕಲಾವಿದರನ್ನು ಒಳಗೊಂಡ ವಿಶೇಷ ವೀಡಿಯೊಂದನ್ನು ಗ್ಲಿಂಪ್ಸ್ ರಿಲೀಸ್ ಗಾಗಿ ಚಿತ್ರ ನಿರ್ಮಾಪಕರು ಶೂಟ್ ಮಾಡಿದ್ದರು. ಅದು ವೈರಲ್ ಕೂಡ ಆಗಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article