ಬೆಂಗಳೂರು: ಇದೇ ತಿಂಗಳ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ (Global Investors Summit) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರನ್ನು ಬುಧವಾರ ಎಂ.ಬಿ ಪಾಟೀಲ್ ಖುದ್ದಾಗಿ ಆಹ್ವಾನಿಸಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಸಚಿವೆಯನ್ನು ಭೇಟಿಯಾದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ಆಮಂತ್ರಣ ನೀಡಿದ್ದಾರೆ. ಇದನ್ನೂ ಓದಿ: ದರ್ಶನ್‌ರನ್ನು ಮದುವೆಗೆ ಯಾಕೆ ಕರೆದಿಲ್ಲ? – ಖಡಕ್ ಪ್ರಶ್ನೆಗೆ ಡಾಲಿ ಧನಂಜಯ್ ಉತ್ತರ
Advertisement
ಈ ಸಂದರ್ಭದಲ್ಲಿ ಹೂಡಿಕೆದಾರರ ಸಮಾವೇಶದ ವೈಶಿಷ್ಟ್ಯಗಳನ್ನು ಮತ್ತು ರಾಜ್ಯ ಸರ್ಕಾರದ ನೂತನ ಕೈಗಾರಿಕಾ ನೀತಿ ಹಾಗೂ ಸ್ವಚ್ಛ ಇಂಧನ ನೀತಿಯ ಬಗ್ಗೆ ನಿರ್ಮಲಾ ಸೀತಾರಾಮನ್ ಅವರಿಗೆ ಎಂ.ಬಿ ಪಾಟೀಲ್ ಮಾಹಿತಿ ನೀಡಿದರು. ಇದನ್ನೂ ಓದಿ: Bengaluru| ಹಣಕಾಸು ವಿಚಾರವಾಗಿ ಗಲಾಟೆ – ಪತ್ನಿಯನ್ನು ಉಸಿರುಗಟ್ಟಿಸಿ ಕೊಂದ ಟೆಕ್ಕಿ
Advertisement
Advertisement
ಬಳಿಕ ಪಾಟೀಲ್ ಅವರು, ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ಎಐಸಿಸಿ ಕರ್ನಾಟಕ ಉಸ್ತುವಾರಿ, ಸಂಸದ ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಿದರು. ಇದನ್ನೂ ಓದಿ: ವರ್ಗಾವಣೆಯಾಗಿ ಅಥವಾ VRS ತೆಗೆದುಕೊಳ್ಳಿ- ಹಿಂದೂಯೇತರ 18 ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ತಿರುಪತಿ ಬೋರ್ಡ್
Advertisement