ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಂಟು ಗಂಟೆ ತಡವಾಗಿ ಥೈಲ್ಯಾಂಡ್‍ನ ಪುಕೆಟ್‍ನತ್ತ ಗೋ ಏರ್ ಜಿ8 041 ವಿಮಾನ ಹಾರಾಟ ನಡೆಸಿದೆ.
ಗೋ ಏರ್ ಜಿ8 041 ವಿಮಾನ ತಡರಾತ್ರಿ 2:30 ಗಂಟಗೆ ಟೇಕಾಫ್ ಆಗಬೇಕಿತ್ತು. ಆದರೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ವಿಮಾನ ಟೇಕಾಫ್ ಆಗಿರಲಿಲ್ಲ. ಹೀಗಾಗಿ ಬೆಳಗ್ಗೆ 8ರಿಂದ 9 ಗಂಟೆ ಮಧ್ಯೆ ಆಕ್ರೋಶಗೊಂಡ ಪ್ರಯಾಣಿಕರು ಏರ್‌ಪೋರ್ಟ್ ರನ್ ವೇಗೆ ನುಗ್ಗಿ ಇತರೆ ವಿಮಾನಗಳ ಹಾರಾಟ ತಡೆಯಲು ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.
Advertisement
Advertisement
ಪ್ರಯಾಣಿಕರ ಆಕ್ರೋಶಕ್ಕೆ ತುತ್ತಾದ ಗೋ ಏರ್ ಸಿಬ್ಬಂದಿ ತಾಂತ್ರಿಕ ದೋಷವನ್ನು ಬಹುಬೇಗ ಸರಿಪಡಿಸಿದರು. ಬೆಳಗ್ಗೆ 10:40 ಗಂಟೆ ಗೋ ಏರ್ ವಿಮಾನ ಪುಕೆಟ್ ಕಡೆಗೆ ಹಾರಾಟ ನಡೆಸಿದ್ದು, ಏರ್‌ಪೋರ್ಟ್ ನಲ್ಲಿ ಪರದಾಡಿದ್ದ ಪ್ರಯಾಣಿಕರು ಕೊನೆಗೆ ನಿಟ್ಟುಸಿರುಬಿಟ್ಟಿದ್ದಾರೆ.
Advertisement
ನಡೆದಿದ್ದೇನು?:
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್)ನಿಂದ ಥೈಲ್ಯಾಂಡ್‍ನ ಪುಕೆಟ್‍ಗೆ ತಡರಾತ್ರಿ 2:30 ಗಂಟೆಗೆ ಗೋ ಏರ್ ಪ್ರಯಾಣ ಬೆಳೆಸಬೇಕಿತ್ತು. ಆದರೆ ತಾಂತ್ರಿಕ ಸಮಸ್ಯೆಗಳಿಂದ ಗೋ ಏರ್ ಟೇಕಾಫ್ ಆಗದ ಕಾರಣ ಪುಕೆಟ್‍ಗೆ ಪ್ರಯಾಣಿಸಲು ಟಿಕೆಟ್ ಬುಕ್ ಮಾಡಿದ್ದ 120 ಮಂದಿ ಪ್ರಯಾಣಿಕರ ಆಕ್ರೋಶದ ಕಟ್ಟೆ ಒಡೆದಿತ್ತು. ಪರ್ಯಾಯ ವಿಮಾನ ಕಲ್ಪಿಸುವುದಾಗಿ ವಿಮಾನ ನಿಲ್ದಾಣದ ಸಿಬ್ಬಂದಿ ತಿಳಿಸಿದ್ದರು. ಆದರೆ ತಡರಾತ್ರಿ 2:30ರಿಂದ ಕಾದ ಪ್ರಯಾಣಿಕರಿಗೆ ಬೆಳಗ್ಗೆ 8 ಗಂಟೆಯಾದರೂ ಪರ್ಯಾಯ ವಿಮಾನ ಕಲ್ಪಿಸುವ ಕೆಲಸ ಮಾಡಲಿಲ್ಲ.
Advertisement
ಕೆಲಸಕ್ಕೆ ಹಾಜರಾಗಿದ್ದ ಪೈಲಟ್ ಹಾಗೂ ಗಗನಸಖಿಯರು ಸಹ ಫ್ಲೈಟ್ ಟೇಕಾಫ್ ಆಗಲ್ಲ. ನಮ್ಮ ಕೆಲಸ ಮುಗಿಯಿತು ಅಂತ ಪ್ರಯಾಣಿಕರನ್ನು ಫ್ಲೈಟ್‍ನಲ್ಲೇ ಬಿಟ್ಟು ಹೊರಟು ಹೋಗಿದ್ದರು. ಇದರಿಂದ ಪ್ರಯಾಣಿಕರ ಆಕ್ರೋಶದ ಕಟ್ಟೆ ಒಡೆದು ಏಕಾಏಕಿ ರನ್ ವೇಗೆ ನುಗ್ಗಿ ಇತರೆ ವಿಮಾನಗಳ ಹಾರಾಟಕ್ಕೆ ಅಡ್ಡಿ ಉಂಟು ಮಾಡಲು ಯತ್ನಿಸಿದ್ದರು. ನಮಗೆ ವಿಮಾನ ಕಲ್ಪಿಸದೆ ಬೇರೆ ಯಾವುದೇ ವಿಮಾನ ಹಾರಾಟ ಮಾಡಬಾರದು ಅಂತ ಪ್ರತಿಭಟನಾಕಾರರು ಆಗ್ರಹಿಸಿದ್ದರು.
ಕೂಡಲೇ ಎಚ್ಚೆತ್ತ ಏರ್‌ಪೋರ್ಟ್ ಭದ್ರತಾ ಸಿಬ್ಬಂದಿ ರನ್ ವೇಗೆ ನುಗ್ಗಿದ್ದ ಪ್ರಯಾಣಿಕರನ್ನು ವಾಪಸ್ ಕರೆತಂದಿದ್ದಾರೆ. ಬಳಿಕ ಪ್ರಯಾಣಿಕರು ಹಾಗೂ ಗೋ ಏರ್ ಸಿಬ್ಬಂದಿ ನಡುವೆ ವಾಗ್ವಾದ ನಡೆಯಿತು. ಬಳಿಕ ವಿಮಾನದ ತಾಂತ್ರಿಕ ದೋಷ ಸರಿಪಡಿಸಲಾಯಿತು.
ಒಂದು ವೇಳೆ ಪ್ರಯಾಣಿಕರು ರನ್ ವೇಗೆ ನುಗ್ಗಿ ಪ್ರತಿಭಟನೆ ಮಾಡದೇ ಇದ್ದಿದ್ದರೆ ವಿಮಾನ ಟೇಕಾಫ್ ಆಗುವುದು ಇನ್ನೂ ತಡವಾಗುತ್ತಿತ್ತು. ಪ್ರತಿಭಟನೆಯಿಂದ ಎಚ್ಚೆತ್ತ ಸಿಬ್ಬಂದಿ ಪ್ರಯಾಣಿಕರ ಸಮಸ್ಯೆಗೆ ಬಹುಬೇಗ ಸ್ಪಂದಿಸಿದರು ಎಂದು ಮಾತು ಸಾರ್ವಜನಿಕರಿಂದ ಕೇಳಿ ಬಂದಿದೆ.