ನವದೆಹಲಿ: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) 55 ಪ್ರಯಾಣಿಕರನ್ನು ಬಿಟ್ಟು ಹೋಗಿದ್ದಕ್ಕಾಗಿ ‘ಗೋ ಫಸ್ಟ್’ (Go First Flight) ವಿಮಾನಯಾನ ಸಂಸ್ಥೆಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) 10 ಲಕ್ಷ ರೂ. ದಂಡವನ್ನು ವಿಧಿಸಿದೆ.
ಈ ಅಚಾತುರ್ಯ ಸಂಭವಿಸಿದ ಬೆನ್ನಲ್ಲೇ ಗೋ ಫಸ್ಟ್ಗೆ ಡಿಜಿಸಿಎ ನೋಟಿಸ್ ನೀಡಿತ್ತು. “ಸಂವಹನ, ಸಮನ್ವಯದ ಕೊರತೆ ಮತ್ತು ದೃಢಪಡಿಸಿಕೊಳ್ಳುವಲ್ಲಿ ಆಗಿರುವ ತಪ್ಪುಗಳಿಂದ ಈ ಲೋಪ ಸಂಭವಿಸಿದೆ. ಈ ನಿರ್ಲಕ್ಷ್ಯಕ್ಕೆ ತಮ್ಮ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಬಾರದು” ಎಂದು ‘ಗೋ ಫಸ್ಟ್’ನ ಅಕೌಂಟೆಬಲ್ ಮ್ಯಾನೇಜರ್/ ಚೀಫ್ ಆಪರೇಷನ್ ಆಫೀಸರ್ಗೆ ಡಿಜಿಸಿಎ ನೋಟಿಸ್ ನೀಡಿತ್ತು. ನೋಟಿಸ್ಗೆ ಉತ್ತರಿಸಲು ಎರಡು ವಾರಗಳ ಕಾಲಾವಕಾಶವನ್ನು ನೀಡಿತ್ತು. ಇದನ್ನೂ ಓದಿ: 50 ಪ್ರಯಾಣಿಕರನ್ನು ಬಿಟ್ಟುಹೋದ ವಿಮಾನ – ಗೋ ಫಸ್ಟ್ಗೆ DGCA ನೋಟಿಸ್
Advertisement
Advertisement
ಏನಿದು ಘಟನೆ?
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಜ.9 ರಂದು ಬೆಳಗ್ಗೆ ಚಲಿಸಿದ ‘ಗೋ ಫಸ್ಟ್’ ಸಂಸ್ಥೆಯ ವಿಮಾನವು (ಜಿ8–116), ವಿಮಾನ ನಿಲ್ದಾಣದಲ್ಲಿ ಪ್ಯಾಸೆಂಜರ್ ಕೋಚ್ನಲ್ಲಿ (ಬಸ್) 55 ಪ್ರಯಾಣಿಕರನ್ನು ಬಿಟ್ಟು ಹೋಗಿತ್ತು.
Advertisement
ಸಿಬ್ಬಂದಿಯಿಂದ ಆದ ಆಚಾತುರ್ಯಕ್ಕಾಗಿ ‘ಗೋ ಫಸ್ಟ್’ ವಿಮಾನಯಾನ ಸಂಸ್ಥೆಯು ಪ್ರಯಾಣಿಕರಲ್ಲಿ ಕ್ಷಮೆ ಕೋರಿತ್ತು. ಪ್ರಯಾಣಿಕರಿಗೆ ದೆಹಲಿ ಮತ್ತು ಇತರ ಸ್ಥಳಗಳಿಗೆ ಪರ್ಯಾಯ ವಿಮಾನಗಳಲ್ಲಿ ವ್ಯವಸ್ಥೆ ಕಲ್ಪಿಸಲಾಯಿತು ಎಂದೂ ಅದು ಹೇಳಿಕೊಂಡಿತ್ತು. ಇದನ್ನೂ ಓದಿ: ಏರ್ ಇಂಡಿಯಾದಲ್ಲಿ ಮೂತ್ರವಿಸರ್ಜನೆ ಪ್ರಕರಣ ಬಳಿಕ ಗೋ ಫಸ್ಟ್ನಲ್ಲಿ ಗಗನಸಖಿಗೆ ವಿದೇಶಿಗನಿಂದ ಕಿರುಕುಳ
Advertisement
ಸಮಸ್ಯೆಗೆ ಒಳಗಾದ ಪ್ರಯಾಣಿಕರಿಗೆ ಮುಂದಿನ 12 ತಿಂಗಳಲ್ಲಿ ದೇಶದ ಯಾವುದೇ ಸ್ಥಳಕ್ಕೆ ಪ್ರಯಾಣಿಸಲು ಒಂದು ಉಚಿತ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎಂದು ಗೋ ಫಸ್ಟ್ ತಿಳಿಸಿತ್ತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k