– ಆ ಉಗ್ರರು ಹಿಂದೂಗಳನ್ನ ಗುರಿಯಾಗಿಸಿಕೊಂಡೇ ಬಂದಂತೆ ತೋರ್ತಿತ್ತು; ಪಲ್ಲವಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ (Terrorist Attack) ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಪ್ರಮುಖರು ತಮ್ಮ ಎಕ್ಸ್ ಖಾತೆಗಳಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಖಂಡಿಸಿದ್ದಾರೆ. ಈ ನಡುವೆ ದಾಳಿಯಲ್ಲಿ ತನ್ನನ ಗಂಡನನ್ನು ಕಳೆದುಕೊಂಡ ಶಿವಮೊಗ್ಗ (Shivamogga) ಮೂಲದ ರಿಯಲ್ ಎಸ್ಟೇಟ್ ಉದ್ಯಮಿಯ ಪತ್ನಿ ಪಲ್ಲವಿ, ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ.
ಮಗನಿಗೆ ಬೇಸಿಗೆ ರಜೆ ಸಿಕ್ಕ ಹಿನ್ನೆಲೆಯಲ್ಲಿ ಕಾಶ್ಮೀರಕ್ಕೆ ತೆರಳಿದ್ದ ವೇಳೆ ದಾಳಿ ನಡೆದಿದೆ. ದಾಳಿಯಿಂದ ಬದುಕುಳಿದಿರುವ ಪಲ್ಲವಿ, ಮನಕಲುಕುವ ಕ್ಷಣಗಳನ್ನು ವಿವರಿಸಿದ್ದಾರೆ. ನಾನು, ನನ್ನ ಪತ್ನಿ, ಮಗ ಕಾಶ್ಮೀರಕ್ಕೆ ಹೋಗಿದ್ದೆವು. ನಾವು ಪಹಲ್ಗಾಮ್‌ನಲ್ಲಿದ್ದಾಗ ಮಧ್ಯಾಹ್ನ 1:30ರ ವೇಳೆಗೆ ದಾಳಿ ನಡೆಯಿತು. ನನ್ನ ಪತಿಯನ್ನ ಕಣ್ಣಮುಂದೆಯೇ ಕೊಂದುಬಿಟ್ಟರು. ಅದನ್ನ ನೆನೆಸಿಕೊಂಡ್ರೆ ಈಗಲೂ ಕೆಟ್ಟ ಕನಸಿನಂತೆ ಭಾಸವಾಗ್ತಿದೆ ಎಂಧು ಭಾವುಕರಾದರು. ಇದನ್ನೂ ಓದಿ: ಪತಿಯನ್ನು ಕೊಂದಿದ್ದೀರಿ, ನನ್ನನ್ನೂ ಕೊಂದುಬಿಡಿ – ಉಗ್ರರಿಂದ ಹತ್ಯೆಗೀಡಾದ ಉದ್ಯಮಿ ಪತ್ನಿಯ ಕಣ್ಣೀರು
ಅವರು ದಾಳಿ ಮಾಡಿದ್ದು ನೋಡಿದ್ರೆ, ಹಿಂದೂಗಳನ್ನ ಗುರಿಯಾಗಿಸಿಕೊಂಡೇ ಬಂದಂತೆ ತೋರ್ತಿತ್ತು. ಮೂರರಿಂದ ನಾಲ್ಕು ಜನ ನಮ್ಮ ಮೇಲೆ ದಾಳಿ ಮಾಡಿದ್ರು. ನಾನು ಅವರಿಗೆ ಹೇಈದೆ. ನನ್ನ ಪತಿಯನ್ನ ಕೊಂದಿದ್ದೀರಿ, ನನ್ನನ್ನೂ ಕೊಂದುಬಿಡಿ ಎಂದು ಹೇಳಿದೆ. ಆಗ ಅವರಲ್ಲಿದ್ದ ಒಬ್ಬ ʻನಾನು ನಿನ್ನನ್ನ ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳುʼ ಅಂತ ಹೇಳಿದ ಎಂದು ಹೇಳಿದರು. ಇದನ್ನೂ ಓದಿ: ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗಲ್ಲ, ದಾಳಿಕೋರರನ್ನು ಸುಮ್ಮನೆ ಬಿಡಲ್ಲ: ಗುಡುಗಿದ ಮೋದಿ
ಇನ್ನೂ ʻಪಬ್ಲಿಕ್ ಟಿವಿʼ ಜೊತೆ ಮಾತನಾಡಿದ ಪಲ್ಲವಿ ಅವರು, ನಾವು ಒಂದು 500 ಜನ ಇದ್ವಿ. ಮಿನಿ ಸ್ವಿಡ್ಜರ್‌ಲ್ಯಾಂಡ್ ಅಂತಾ ಒಂದು ಪಾಯಿಂಟ್ ಅದು. ಆಗಷ್ಟೇ ಹೋಗಿ ಕುದುರೆ ಇಳಿದಿದ್ವಿ. ನನ್ನ ಮಗ ಬೆಳಗ್ಗೆಯಿಂದ ಏನೂ ತಿಂದಿರಲಿಲ್ಲ. ಅಲ್ಲೇನಾದ್ರೂ ತಗೊಳೋಕೆ ಅಂತಾ ನಮ್ಮ ಮನೆಯವರು, ಅಂಗಡಿಯವರ ಬಳಿ ವಿಚಾರಿಸಲು ಹೋದರು. ನನ್ನ ಮಗನ ಕರೆಯಲು ನಾನು ಹೋದೆ. ಗುಂಡಿನ ತರ ಸೌಂಡ್ ಬಂತು. ನಾವೆಲ್ಲಾ ಆರ್ಮಿಯವರು ಇರಬೇಕು ಅಂನ್ಕೊಂಡ್ವಿ. ನಾನು ಈ ಕಡೆ ತಿರುಗಿ ನೋಡೋ ಅಷ್ಟರಲ್ಲಿ ಬೇರೆಯವರೆಲ್ಲಾ ಓಡುತ್ತಿದ್ದರು. ನನ್ನ ಮಗನ ಕರೆದುಕೊಳ್ಳೋಕೆ ಅಂತಾ ನೋಡ್ತಿನಿ, ಅಷ್ಟರಲ್ಲಿ ನಮ್ಮ ಮನೆಯವರು ರಕ್ತದ ಮಡುವಿನಲ್ಲಿ ಇದ್ದರು. ಅವರು ತಲೆಗೆ ಹೊಡೆದಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Pahalgam Terrorist Attack – ಉಗ್ರರ ದಾಳಿಗೆ ಮತ್ತೊಬ್ಬ ಕನ್ನಡಿಗ ಬಲಿ
ನಾನು ಅಲ್ಲೇ ಇದ್ದ ಭಯೋತ್ಪಾದಕನ ಬಳಿ ನನ್ನ ಪತಿಯನ್ನು ಸಾಯಿಸಿದ್ದೀರಾ, ನನ್ನನ್ನು ಸಾಯಿಸಿ ಎಂದು ನಾನು ಕೇಳಿದೆ. ನನ್ನ ಮಗ ಏ ನಾಯಿ… ನನ್ನ ತಂದೆಯನ್ನು ಕೊಂದೆಯಲ್ಲಾ, ನಮ್ಮನ್ನು ಕೊಂದುಬಿಡು ಎಂದ.. ಇಲ್ಲ ನಿಮ್ಮನ್ನು ಸಾಯಿಸಲ್ಲ. ಮೋದಿಗೆ ಹೋಗಿ ಹೇಳು ಎಂದು ಹೋದ. ನಮ್ಮ ಎದುರಿಗೆ ಓಡಾಡುತ್ತಿದ್ದರು. ಯಾರೂ ಇರಲಿಲ್ಲ.. ಸೈನಿಕರೂ ಯಾರೂ ಇರಲಿಲ್ಲ. ಮಾಮೂಲಿ ಬಟ್ಟೆಯಲ್ಲಿ ಇದ್ದರು. ನವ ದಂಪತಿ ಒಬ್ಬರು ಬಂದಿದ್ದರು. ಗಂಡಸರಿಗೆ ಮಾತ್ರ ಹೊಡೆದರು. ಹೆಂಗಸರು, ಮಕ್ಕಳಿಗೆ ಏನೂ ಆಗಿಲ್ಲ. ನಮಗೆ ನಮ್ಮ ಮನೆಯವರ ಮೃತದೇಹ ಬೇಗ ಸಿಗಬೇಕು, ಫ್ಲೈಟ್ ಅರೆಂಜ್ ಮಾಡಿ, ಕಳಿಸಿ ಎಂದು ಒತ್ತಾಯಿಸಿದ್ದಾರೆ.