ನವದೆಹಲಿ/ಬೆಂಗಳೂರು: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮದ ದಿನವೇ CET ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳಲ್ಲಿ ಆತಂಕ ಎದುರಾಗಿದೆ. ಕಂಠೀರವ ಕ್ರೀಡಾಂಗಣದ ಸುತ್ತಮುತ್ತ ಇರುವ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಂಚಾರದ ತೊಂದರೆಯಾಗುವ ಸಾಧ್ಯತೆ ಇದೆ.
ಪ್ರಮಾಣವಚನ ಹಿನ್ನಲೆಯಲ್ಲಿ ಕಂಠೀರವ ಕ್ರೀಡಾಂಗಣದ ಸುತ್ತುಮುತ್ತ ಬರುವ ವಾಹನಗಳಿಗೆ ಪರ್ಯಾಯ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರು ಸಂಚಾರಿ ಪೊಲೀಸರಿಂದ ಸೂಕ್ತ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಗಣ್ಯ ವ್ಯಕ್ತಿಗಳು ಬರುತ್ತಿರುವ ಹಿನ್ನಲೆ ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲಾಗಿದೆ. ಇದನ್ನೂ ಓದಿ: 2,000 ರೂ. ಮುಖಬೆಲೆಯ ನೋಟ್ ಬ್ಯಾನ್ ಮಾಡಿದ RBI
Advertisement
Advertisement
ಕ್ವೀನ್ಸ್ ರಸ್ತೆ ಕಡೆಯಿಂದ ಸಿದ್ದಲಿಂಗಯ್ಯ ವೃತ್ತದ ಕಡೆ ಹೋಗುವ ಎಲ್ಲಾ ಮಾದರಿಯ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಪರ್ಯಾಯ ಮಾರ್ಗ ಲ್ಯಾವೇಲ್ಲಿ ರೋಡ್ ಮೂಲಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
Advertisement
ಬೆಂಗಳೂರಿನಲ್ಲಿ ಟ್ರಾಫಿಕ್ ಆಗುವ ಸಾಧ್ಯತೆ ಇರುವ ಕಾರಣ ವಿದ್ಯಾರ್ಥಿಗಳು ಬೆಳಗ್ಗೆ 8.30 ಕ್ಕೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಎಲ್ಲಾ ಕೇಂದ್ರಗಳಿಗೂ 8.30 ಕ್ಕೆ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿದೆ. ಇದನ್ನೂ ಓದಿ: ಸಿಇಟಿ ಪರೀಕ್ಷೆ ದಿನವೇ ಪ್ರಮಾಣವಚನ – ಮೋದಿ ರ‍್ಯಾಲಿ ಇರೋವಾಗ ಮಾತ್ರ ನಿಮ್ಗೆ ವಿದ್ಯಾರ್ಥಿಗಳು ಕಾಣೋದ?: ಬಿಎಲ್ ಸಂತೋಷ್
Advertisement
ಈ ಕುರಿತು ಪ್ರತಿಕ್ರಿಯೆ ನೀಡಿರುವ ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು, ವಿದ್ಯಾರ್ಥಿಗಳು ಬೇಗನೇ ಪರೀಕ್ಷೆ ಕೇಂದ್ರಗಳಿಗೆ ತೆರಳಲು ಮನವಿ ಮಾಡಿದ್ದಾರೆ. ನಾಳೆ ಪ್ರಮಾಣವಚನ ಕಾರ್ಯಕ್ರಮ ಹಿನ್ನಲೆ ಸಮಸ್ಯೆ ಆಗಬಹುದು. ಕಂಠೀರವ ಸ್ಟೇಡಿಯಂ ಸುತ್ತಲಿನ ಪರೀಕ್ಷಾ ಕೇಂದ್ರಗಳಿಗೆ ಬೇಗನೇ ತೆರಳಲು ಮನವಿ ಮಾಡಿದ್ದಾರೆ.