ಪಣಜಿ: ಗೋವಾ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.
ಮಾಜಿ ಸಿಎಂ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರಿಗೆ ಬಿಜೆಪಿ ಟಿಕೆಟ್ ನೀಡದ್ದಕ್ಕೆ ಪಕ್ಷವನ್ನು ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಈಗ ಪರ್ಸೆಕರ್ ಅವರಿಗೂ ಟಿಕೆಟ್ ನಿರಾಕರಿಸಿದ್ದು, ಅಧ್ಯಕ್ಷ ಸದಾನಂದ್ ತಾನಾವ್ಡೆ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲೇ ದ್ವಂದ್ವ – ನೈಟ್ ಕರ್ಫ್ಯೂ ಬಗ್ಗೆ ಡಿಕೆಶಿ, ಸಿದ್ದು ಭಿನ್ನ ಅಭಿಪ್ರಾಯ
Advertisement
Former Goa CM Laxmikant Parsekar resigns from BJP.
He was denied ticket by the party for the upcoming #GoaElections2022 pic.twitter.com/wUbw2rfhEd
— ANI (@ANI) January 22, 2022
Advertisement
ಭಾರತೀಯ ಜನತಾ ಪಾರ್ಟಿ ಗೋವಾದ ಪ್ರದೇಶದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ಈ ಮೂಲಕ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಈ ಕ್ಷಣವೇ ಅಗೀಕರಿಸಬೇಕು ಮತ್ತು ಚಟುವಟಿಕೆಗಳಿಗೆ ಸಂಬಂಧಿಸಿದ ಎಲ್ಲಾ ಜವಾಬ್ದಾರಿಗಳಿಂದ ನನ್ನನ್ನು ತಕ್ಷಣವೇ ಮುಕ್ತಗೊಳಿಸಬೇಕೆಂದು ಪರ್ಸೆಕರ್ ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದ ಜನತೆಗೆ ಏಕಕಾಲದಲ್ಲಿ ಮೂರು ಶಾಕ್ – ಹಾಲು, ವಿದ್ಯುತ್, ಸಾರಿಗೆ ಸೇರಿ ಬೆಂಗ್ಳೂರಿಗರಿಗೆ ನೀರಿನ ದರ ಏರಿಕೆ?
Advertisement
ಲಕ್ಷ್ಮೀಕಾಂತ್ ಪರ್ಸೇಕರ್ ಅವರನ್ನು ಗೋವಾ ವಿಧಾನಸಭೆ ಚುನಾವಣೆ 2022ರ ಪ್ರಣಾಳಿಕೆ ಸಮಿತಿಯ ಸಂಚಾಲಕರನ್ನಾಗಿ ಬಿಜೆಪಿ ನೇಮಕ ಮಾಡಿತ್ತು.
Advertisement
ಮನೋಹರ್ ಪರಿಕ್ಕರ್ ಅವರು ಕೇಂದ್ರ ರಕ್ಷಣಾ ಸಚಿವರಾಗಿ ನೇಮಕವಾದ ಬಳಿಕ ತೆರವಾದ ಸಿಎಂ ಹುದ್ದೆಗೆ ಬಿಜೆಪಿ ಹೈಕಮಾಂಡ್ ಪರ್ಸೇಕರ್ ಅವರನ್ನು ಆಯ್ಕೆ ಮಾಡಿತ್ತು. 2014ರಿಂದ 2017ರವರೆಗೆ ಮುಖ್ಯಮಂತ್ರಿ ಹುದ್ದೆಯನ್ನು ಪರ್ಸೇಕರ್ ಅಲಂಕರಿಸಿದ್ದರು.