ಪಣಜಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಜನವರಿ 19 ರಂದು ಪ್ರಕಟಿಸಲಾಗುವುದಾಗಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಇಂದು ಮುಂಜಾನೆ ಮತ್ತೆ ಗೋವಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಮೋದ್ ಸಾವಂತ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಜನವರಿ 19 ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?
Advertisement
The final list of BJP candidates for the Goa Assembly elections will be announced on January 19: CM Pramod Sawant pic.twitter.com/Rc9Gbkoo23
— ANI (@ANI) January 16, 2022
Advertisement
ಮುಂದಿನ ವಿಧಾನಸಭಾ ಚುನಾವಣೆಯ ಕುರಿತಂತೆ ಚರ್ಚಿಸಲು ಪಕ್ಷದ ಮುಖಂಡರನ್ನು ಭೇಟಿ ಮಾಡಿದ್ದೇನೆ. ಜನವರಿ 19 ರಂದು ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗುವುದು ಎಂದಿದ್ದಾರೆ. ಈ ಮುನ್ನ ಭಾನುವಾರ ಮಧ್ಯಾಹ್ನ ಗೋವಾ ವಿಧಾನಸಭೆಯ 40 ಸ್ಥಾನಗಳ ಕುರಿತಂತೆ ಆಡಳಿತ ಪಕ್ಷ ಸಭೆ ನಡೆಸಿತು. ಈ ಸಭೆಯಲ್ಲಿ ಪ್ರಮೋದ್ ಸಾವಂತ್ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವಿಸ್, ಜಿ ಕಿಶನ್ ರೆಡ್ಡಿ ಮತ್ತು ಸಂಘಟನಾ ಸಚಿವರು ಸಭೆಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ದೇಶದಲ್ಲಿ ಒತ್ತಾಯದಿಂದ ಯಾರಿಗೂ Corona Vaccine ನೀಡಲ್ಲ: ಕೇಂದ್ರ ಸರ್ಕಾರ
Advertisement
ಗೋವಾದ ವಿಧಾನಸಭಾ ಚುನಾವಣೆಯಲ್ಲಿ 40 ಸ್ಥಾನಗಳ ಪೈಕಿ 38 ಮಂದಿ ಭಾರತೀಯ ಜನತಾ ಪಕ್ಷದಿಂದ ಈ ಬಾರಿ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದ್ದು, ಕ್ರಿಶ್ಚಿಯನ್ ಬಹುಸಂಖ್ಯಾತ ಪ್ರದೇಶಗಳಲ್ಲಿ ಇಬ್ಬರು ಅಭ್ಯರ್ಥಿಗಳನ್ನು ಮತ್ತೆರಡು ಸ್ಥಾನಕ್ಕೆ ಕಣಕ್ಕಿಳಿಸದಿರಲು ಬಿಜೆಪಿ ನಿರ್ಧರಿಸಿದೆ.