ಬೆಳಗಾವಿ ಆರ್‌ಎಸ್‌ಎಸ್ ಕಚೇರಿಗೆ ಗೋವಾ ಸಿಎಂ ಭೇಟಿ – ಇನ್ನೊಮ್ಮೆ ಮೋದಿ ಪ್ರಧಾನಿ ಆಗ್ತಾರೆ ಎಂದ ಸಾವಂತ್

Public TV
1 Min Read
Pramod Sawant

ಬೆಳಗಾವಿ: ಖಾಸಗಿ ಕಾರ್ಯಕ್ರಮಗಳ ನಿಮಿತ್ತ ಕುಂದಾನಗರಿ ಬೆಳಗಾವಿಗೆ ಆಗಮಿಸಿದ ಗೋವಾ ಸಿಎಂ ಪ್ರಮೋದ್ ಸಾವಂತ್ ನಗರದ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡಿ ಮುಖಂಡರೊಂದಿಗೆ ಕುಶಲೋಪರಿ ಹಂಚಿಕೊಂಡರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಾವಂತ್, 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಯಾರು ಏನೇ ಮಾತನಾಡಿದರೂ ಕೇಂದ್ರ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಿಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡಿದ ವಿಚಾರವಾಗಿ ಮಾತನಾಡಿದ ಸಾವಂತ್ ನಾನು ಎಲ್ಲೇ ಹೋದರೂ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ಕೊಡುತ್ತೇನೆ. ಅದೇ ರೀತಿ ಇಲ್ಲಿಯೂ ಭೇಟಿ ಕೊಟ್ಟಿದ್ದೇನೆ. ಬೆಳಗಾವಿ ಕಾರ್ಯಕ್ರಮ ಮುಗಿಸಿ ಕೊಲ್ಲಾಪುರ ಮಹಾಲಕ್ಷ್ಮಿದೇವಿ ದರ್ಶನಕ್ಕೆ ತೆರಳುತ್ತೇನೆ. ಕೊಲ್ಲಾಪುರದಲ್ಲಿ ನನ್ನ ಸ್ನೇಹಿತರು ನನಗೆ ಸನ್ಮಾನ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ ಅಲ್ಲಿಗೆ ಹೋಗುತ್ತಿದ್ದೇನೆ ಎಂದರು. ಇದನ್ನೂ ಓದಿ: XE ರೂಪಾಂತರಿ ಮುಂಬೈನಲ್ಲಿ ಪತ್ತೆಯಾಗಿಲ್ಲ: ಮಹಾರಾಷ್ಟ್ರ ಸ್ಪಷ್ಟನೆ

pramod sawant

ಗೋವಾದಲ್ಲಿ ಮತ್ತೊಮ್ಮೆ ಸಿಎಂ ಆಗಿರುವ ವಿಚಾರಕ್ಕೆ, ನಾನು ಎರಡನೇ ಬಾರಿಗೆ ಗೋವಾ ಸಿಎಂ ಆಗಿದ್ದಕ್ಕೆ ಬಿಜೆಪಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂಬರುವ ನನ್ನ ಆಡಳಿತದ ಅವಧಿಯಲ್ಲಿ ಗೋವಾದಲ್ಲಿ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಹೆಚ್ಚಿನ ಮಹತ್ವ ಕೊಡುತ್ತೇನೆ. ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಕನಸಾಗಿರುವ ಆತ್ಮ ನಿರ್ಬರ್ ಮಾಡಲು ಪಣತೊಡುತ್ತೇನೆ ಎಂದರು. ಇದನ್ನೂ ಓದಿ: ‘ಬಿಗ್ ಬ್ರದರ್’ ಎಂದು ಭಾರತ, ಮೋದಿಗೆ ಧನ್ಯವಾದ ಹೇಳಿದ ಲಂಕಾ ಕ್ರಿಕೆಟಿಗ ಜಯಸೂರ್ಯ

ಇದೇ ವೇಳೆ ಅಲ್ ಖೈದಾ ಮುಖ್ಯಸ್ಥನ ಪ್ರತಿಕ್ರಿಯೆ ವಿಚಾರಕ್ಕೆ ಕೇಳಲಾದ ಪ್ರಶ್ನೆಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಪ್ರತಿಕ್ರಿಯೆ ನೀಡದೇ ತೆರಳಿದರು.

Share This Article
Leave a Comment

Leave a Reply

Your email address will not be published. Required fields are marked *