ಪಣಜಿ: ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಪಣಜಿ ಕ್ಷೇತ್ರದಲ್ಲಿ ಪಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್, ಬಿಜೆಪಿ ಅಭ್ಯರ್ಥಿ ವಿರುದ್ಧ ಸೋತಿದ್ದಾರೆ.
ಬಿಜೆಪಿ ಅಭ್ಯರ್ಥಿ ಅಟಾನಾಸಿಯೊ ಮಾನ್ಸೆರೇಟ್ ಅವರು ಗೆಲುವಿನ ನಗೆ ಬೀರಿದ್ದಾರೆ. ಆದರೆ ಗೆಲುವಿನ ಅಂತರದ ಬಗ್ಗೆ ಅವರು ಬೇಸರಗೊಂಡಿದ್ದಾರೆ. ಬಿಜೆಪಿ ಬೆಂಬಲಿತರೇ ತಮಗೆ ಮತ ಹಾಕಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಪಂಚರಾಜ್ಯಗಳಲ್ಲಿ ಸೋಲು: ಇವಿಎಂ ವಿರುದ್ಧ ಕೈ ಕಾರ್ಯಕರ್ತರ ಪ್ರತಿಭಟನೆ
Advertisement
Advertisement
ಬಿಜೆಪಿ ಬೆಂಬಲಿತರೇ ನನಗೆ ಮತ ಹಾಕಿಲ್ಲ. ಇದನ್ನು ಬಿಜೆಪಿ ನಾಯಕರಿಗೆ ಹೇಳಿದ್ದೇನೆ. ಭವಿಷ್ಯದಲ್ಲಿ ಅವರು ಈ ಬಗ್ಗೆ ಗಮನಹರಿಸಬೇಕು. ರಾಜ್ಯ ಬಿಜೆಪಿ ಘಟಕ ಜನರಿಗೆ ಸರಿಯಾದ ಸಂದೇಶ ನೀಡಿಲ್ಲ. ನಾನು ಎಲ್ಲಾ ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದು, ಬಿಜೆಪಿಯೊಂದಿಗಿದ್ದೇನೆ ಎಂದು ತಿಳಿಸಿದ್ದಾರೆ.
Advertisement
ಪಣಜಿ ಕ್ಷೇತ್ರದಲ್ಲಿ ತನಗೆ ಟಿಕೆಟ್ ನೀಡದೇ ಮಾನ್ಸೆರೇಟ್ ಅವರನ್ನು ಕಣಕ್ಕಿಳಿಸಿದ್ದಕ್ಕೆ ಅಸಮಾಧಾನಗೊಂಡಿದ್ದ ಉತ್ಪಲ್ ಪರಿಕ್ಕರ್ ಅವರು ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದನ್ನೂ ಓದಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್‌ಗೆ ಸೋಲು
Advertisement
ಮೂರು ಬಾರಿ ಗೋವಾದ ಸಿಎಂ ಆಗಿದ್ದ ಮನೋಹರ್ ಪರಿಕ್ಕರ್ ಅವರು 25 ವರ್ಷಗಳ ಕಾಲ ಪಣಜಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2019ರಲ್ಲಿ ಅವರ ಮರಣ ನಂತರ ನಡೆದ ಉಪಚುನಾವಣೆಯಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದ ಪ್ರತಿಸ್ಪರ್ಧಿ ಮಾನ್ಸೆರೇಟ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದಿದ್ದರು. ನಂತರ ಅವರು ಬಿಜೆಪಿ ಸೇರಿದ್ದರು.