BelgaumDistrictsKarnatakaLatestMain PostNational

ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆಯಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಪಣಜಿ: ಗೋವಾ ಮಾಜಿ ರಾಜ್ಯಪಾಲರು ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರದಿಂದ ಬಹಳಷ್ಟು ಭ್ರಷ್ಟಾಚಾರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಬಿಜೆಪಿ ಅವರಿಗೆ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದು ಗೋವಾದ ಎರಡು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಾರೆ. ಆದರೆ ಮಾಜಿ ರಾಜ್ಯಪಾಲರು ಕೋವಿಡ್ ಸಮಯದಲ್ಲಿ ಗೋವಾ ಬಿಜೆಪಿ ಸರ್ಕಾರ ಬಹಳಷ್ಟು ಹಗರಣ, ಭ್ರಷ್ಟಾಚಾರ ಮಾಡಿದೆ ಎಂದು ಹೇಳಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರ ನೇಮಿಸಿದ ರಾಜ್ಯಪಾಲರು ಈ ಹೇಳಿಕೆಯನ್ನು ನೀಡಿದ್ದಾರೆ. ಇದಕ್ಕಿಂತ ಏನಾದರೂ ಸಾಕ್ಷಿ ಬೇಕಾ? ಅಂಗೈ ಹುಣ್ಣಿಗೆ ಕನ್ನಡಿ ಬೇಕಾ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.

ಗೋವಾದ ಪ್ರಬುದ್ಧ ಮತದಾರರು ಭ್ರಮನಿರಸನಗೊಂಡಿದ್ದಾರೆ. ಹತ್ತು ವರ್ಷದಿಂದ ಬಿಜೆಪಿಯವರು ಏನ್ ಮಾತನಾಡಿದ್ದಾರೋ ಅದನ್ನು ಮಾಡಿಲ್ಲ. ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಲು ಜನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿ ತನ್ನ ಬೊಕ್ಕಸ ತುಂಬಲು ಬಡವರ ಜೇಬಿಗೆ ಕತ್ತರಿ ಹಾಕ್ತಿದೆ: ಚರಣ್ ಸಿಂಗ್ ಸಪ್ರಾ

ಫೆಬ್ರವರಿ 14ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಹೆಚ್ಚು ಪ್ರಚಾರ ನಡೆಸುತ್ತಿದೆ. ಈ ಬಾರಿ ಶಿವಸೇನೆ, ಆಪ್ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ. ಇದನ್ನೂ ಓದಿ: ರೈತರು ದೀರ್ಘ ಹೋರಾಟಕ್ಕೆ ಸಿದ್ಧರಾಗಿ: ರಾಕೇಶ್ ಟಿಕಾಯತ್

Leave a Reply

Your email address will not be published.

Back to top button