ಪಣಜಿ: ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ಮಾತ್ರ ಪ್ರಬಲ ಪೈಪೋಟಿಯಿದೆ. ಬೇರೆ ಯಾವುದೇ ಪಕ್ಷಗಳಿಗಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿಳಿಸಿದರು.
ವರ್ಚುವಲ್ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮಾತ್ರ ಸ್ಪರ್ಧೆಯಿದೆ. ಹೀಗಾಗಿ ಉಳಿದ ಪಕ್ಷಗಳಿಗೆ ನಿಮ್ಮ ಮತಗಳನ್ನು ನೀಡಿ ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಹೇಳಿದರು.
ಕೊರೊನಾ ಸಮಯದಲ್ಲಿ ಕೋವಿಡ್ 19 ನಿರ್ವಹಣೆ, ಜೀವನೋಪಾಯ, ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಜೊತೆಗೆ ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮಾಡಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಅಂಗನವಾಡಿ ಕೇಂದ್ರಗಳ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ದನಿ ಎತ್ತಿದ ಸುಮಲತಾ
ಈ ಬಾರಿ ಪಕ್ಷಾಂತರಿಗೆ ಟೆಕೆಟ್ ನೀಡಿಲ್ಲ, ಬದಲಿಗೆ ಹೊಸಬರಿಗೆ ಅವಕಾಶ ನೀಡಲಾಗಿದೆ. ಇದರಿಂದ ಬಹುಮತದೊಂದಿಗೆ ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಲಿದೆ. ಗೋವಾದಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಮತದಾರರ ಸಹಕಾರದೊಂದಿಗೆ ಕಾಂಗ್ರೆಸ್ ಪಕ್ಷವು ಗೋವಾದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ, ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ನಿಮ್ಮ ಮಾತನ್ನು ಕೇಳುವ ಸರ್ಕಾರಕ್ಕೆ ಮತ ನೀಡುವಂತೆ ಮನವಿ ಮಾಡಿದರು. ಇದನ್ನೂ ಓದಿ: ಆಸ್ತಿಗಾಗಿ ಬದುಕಿದ್ದ ಅಜ್ಜಿಯನ್ನು ದಾಖಲೆಗಳಲ್ಲಿ ಸಾಯಿಸಿದ ಸಂಬಂಧಿಕರು – ಡೆತ್ ಸರ್ಟಿಫಿಕೇಟ್ ಕೊಟ್ಟ ಅಧಿಕಾರಿ!