ಪಣಜಿ: ಗೋವಾ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಹಾವು, ಏಣಿ ಆಟ ಆರಂಭವಾಗಿದೆ. ಆರಂಭದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೆ ನಂತರ ಕಾಂಗ್ರೆಸ್ ಮುನ್ನಡೆ ಸಾಧಿಸಿ ಈಗ ಮತ್ತೆ ಬಿಜೆಪಿ ಮುನ್ನಡೆ ಪಡೆದಿದೆ.
ಬೆಳಗ್ಗೆ 10:30ರ ಟ್ರೆಂಡ್ ಪ್ರಕಾರ ಬಿಜೆಪಿ 18, ಕಾಂಗ್ರೆಸ್ 13 ರಲ್ಲಿ ಮುನ್ನಡೆ ಸಾಧಿಸಿದೆ. ಹಾರುವ ಶಾಸಕರು ಖ್ಯಾತಿಯ ಗೋವಾದಲ್ಲಿ ಈ ಬಾರಿ ಯಾವುದೇ ಪಕ್ಷಕ್ಕೂ ಬಹುಮತ ಸಿಗುವುದು ಅನುಮಾನ ಎಂದು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿತ್ತು.
Advertisement
Advertisement
ಕಳೆದ ಬಾರಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ಅಧಿಕಾರಕ್ಕೇರುವಲ್ಲಿ ವಿಫಲವಾಗಿದ್ದ ಕಾಂಗ್ರೆಸ್ ಪಕ್ಷದಲ್ಲಿ, ಈ ಚುನಾವಣೆ ಬರುವ ಹೊತ್ತಿಗೆ ಕೇವಲ ಒಬ್ಬ ಶಾಸಕ ಉಳಿದುಕೊಂಡಿದ್ದರು. ಸ್ಥಳೀಯ ನಾಯಕರು ಇಲ್ಲದೇ ಹೋದರೂ ಈ ಬಾರಿಯೂ ಕಾಂಗ್ರೆಸ್ ಹೆಚ್ಚು ಸ್ಥಾನ ಗಿಟ್ಟಿಸಲಿದೆ. ಕಾಂಗ್ರೆಸ್ ಸರಿಸಮನಾಗಿ ಬಿಜೆಪಿ ಫೈಟ್ ಕೊಟ್ಟಿದೆ. ಇಲ್ಲಿ ಯಾವುದೇ ಪಕ್ಷ ಗೆದ್ರೂ ಮೂರ್ನಾಲ್ಕು ಸೀಟುಗಳ ಅಂತರ ಅಷ್ಟೇ ಇರಲಿದೆ.. ಎಎಪಿ-ಟಿಎಂಸಿ ಪಕ್ಷಗಳು ಖಾತೆ ತೆರೆಯಲಿವೆ ಎಂಬ ಲೆಕ್ಕಗಳು ಈ ಎಕ್ಸಿಟ್ ಪೋಲ್‍ನಲ್ಲಿ ಸಿಕ್ಕಿತ್ತು. ಇದನ್ನೂ ಓದಿ: ಜ್ಯೋತಿಷಿಗಳ ಭವಿಷ್ಯ – ಮಂಗಳ ಗ್ರಹದಿಂದ ಯೋಗಿಗೆ ಅದೃಷ್ಟ
Advertisement
ಗೋವಾದಲ್ಲಿ ಒಟ್ಟು 40 ಸ್ಥಾನಗಳಿದ್ದು, ಬಹುಮತಕ್ಕೆ 21 ಬೇಕಿದೆ. 2017ರ ಫಲಿತಾಂಶದಲ್ಲಿ ಕಾಂಗ್ರೆಸ್ 17, ಬಿಜೆಪಿ 13, ಆಪ್ 0, ಇತರರು 10 ಸ್ಥಾನ ಪಡೆದಿದ್ದರು.