ಪಣಜಿ: ಕಾಂಗ್ರೆಸ್‍ನಿಂದ ಪಕ್ಷಾಂತರಗೊಂಡರೆ ಅವರನ್ನು ಪಕ್ಷಕ್ಕೆ ವಾಪಸ್ ತೆಗೆದುಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಗೋವಾದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಖಡಕ್ ಆಗಿ ಸೂಚಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಚುನಾವಣೆಗೆ ಸ್ಪರ್ಧಿಸುವ 37 ಅಭ್ಯರ್ಥಿಗಳ ಪೈಕಿ 36 ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಿದ್ದೇವೆ. ಇನ್ನೊಂದು ಸ್ಥಾನಕ್ಕೆ ಅಭ್ಯರ್ಥಿಯ ಹೆಸರನ್ನು ಸೂಚಿಸಬೇಕು. ಅದನ್ನು ಶೀಘ್ರದಲ್ಲೇ ಘೋಷಿಸುತ್ತೇವೆ ಎಂದ ಅವರು ಕಾಂಗ್ರೆಸ್ ಪಕ್ಷದಲ್ಲಿ ನಾನು ಉನ್ನತ ಸ್ಥಾನವನ್ನು ಹೊಂದಿದ್ದೇನೆ. ಕಾಂಗ್ರೆಸ್‍ನಿಂದ ಪಕ್ಷಾಂತರಗೊಂಡವರನ್ನು ವಾಪಸ್ ಪಡೆಯುವುದಿಲ್ಲ ಎಂದು ತಿಳಿಸಿದರು.
2007ರ ಚುನಾವಣೆಯಲ್ಲಿ ಗೋವಾ ಅತಂತ್ರವಾಗಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನದಲ್ಲಿದ್ದರೂ ಸರ್ಕಾರ ರಚಿಸುವಷ್ಟು ಸ್ಥಾನವನ್ನು ಹೊಂದಿರಲಿಲ್ಲ. ಆದರೆ ಕಾಂಗ್ರೆಸ್‍ನ 17 ಶಾಸಕರಲ್ಲಿ 15 ಶಾಸಕರು ಬಿಜೆಪಿಯನ್ನು ಸೇರಿ ಸರ್ಕಾರ ರಚಿಸಿದ್ದರು. ಇದರಿಂದ ಕಾಂಗ್ರೆಸ್ ಭಾರೀ ಮುಖಭಂಗವನ್ನು ಅನುಭವಿಸಿತ್ತು. ಇದನ್ನೂ ಓದಿ: UP Election: ಭಾರತದ ಅತಿ ಎತ್ತರದ ಮನುಷ್ಯ ಸಮಾಜವಾದಿ ಪಕ್ಷ ಸೇರ್ಪಡೆ
ಈ ಬಾರಿಯ ಗೋವಾ ಚುನಾವಣೆ ಫೆ.14 ರಂದು ನಡೆಯಲಿದ್ದು, ಮಾ. 10ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದೆ. ಈಗಾಗಲೇ ಬಿಜೆಪಿಯೂ ತಮ್ಮ ಸ್ಪರ್ಧಿಯನ್ನು ಘೋಷಿಸಿದ್ದು, ಪ್ರಚಾರವನ್ನು ಆರಂಭಿಸಿದೆ. ಇದನ್ನೂ ಓದಿ: NDRF ಟ್ವಿಟ್ಟರ್ ಖಾತೆ ಹ್ಯಾಕ್