ಪಣಜಿ: ಗೋವಾ ವಿಧಾನಸಭೆ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಶಿವಸೇನೆ ತಮ್ಮ ಅಭ್ಯರ್ಥಿಯನ್ನು ಹಿಂಪಡೆದು ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಪುತ್ರ ಉತ್ಪಾಲ್ ಅವರಿಗೆ ಬೆಂಬಲ ನೀಡಲು ನಿರ್ಧರಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಶಿವಸೇನಾ ಸಂಸದ ಸಂಜಯ್ ರಾವತ್ ಅವರು, ನಾವು ನಮ್ಮ ಮಾತನ್ನು ಉಳಿಕೊಳ್ಳುತ್ತಿದ್ದೇವೆ. ಶಿವಸೇನೆಯು ಪಣಜಿಯಿಂದ ತನ್ನ ಅಭ್ಯರ್ಥಿ ಶೈಲೇಂದ್ರ ವೆಲಿಂಗ್ಕರ್ ಅವರನ್ನು ಹಿಂತೆಗೆದುಕೊಳ್ಳುತ್ತಿದೆ. ಅಷ್ಟೇ ಅಲ್ಲದೇ, ನಮ್ಮ ಕಾರ್ಯಕರ್ತರು ಉತ್ಪಲ್ ಪರಿಕ್ಕರ್ ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಪಣಜಿಯ ಕದನವು ಕೇವಲ ಚುನಾವಣೆಯಷ್ಟೇ ಅಲ್ಲದೆ ಗೋವಾ ರಾಜಕೀಯದ ಶುದ್ಧೀಕರಣವೂ ಆಗಿದೆ ಎಂದು ನಾವು ನಂಬುತ್ತೇವೆ ಎಂದು ಪೋಸ್ಟ್ ಮಾಡಿದ್ದಾರೆ.
We’re keeping our word. @ShivSena is withdrawing it’s candidate Shailendra Velingkar frm #Panaji. Not just that,our workers wil fully support #UtpalParrikar.We believe that the battle for Panaji is just abt election, but also abt purification of Goa Politics.@AUThackeray pic.twitter.com/EZZDQognU0
— Sanjay Raut (@rautsanjay61) January 31, 2022
ಈ ಹಿಂದೆ ಪಣಜಿಯಿಂದ ಸ್ಪರ್ಧಿಸಲು ಉತ್ಪಲ್ ಪರಿಕ್ಕರ್ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಅವರನ್ನು ಎಲ್ಲಾ ವಿರೋಧ ಪಕ್ಷಗಳು ಬೆಂಬಲಿಸಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಯನ್ನು ವಾಪಸ್ ಪಡೆದಿದ್ದಾರೆ.
ಉತ್ಪಲ್ ಪರಿಕ್ಕರ್ ಅವರ ಆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಮೊದಲು ತಿಳಿಸಲಾಗಿತ್ತು. ಆದರೆ ಅಟಾನಾಸಿಯೊ ಬಾಬುಷ್ ಮಾನ್ಸೆರೇಟ್ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ. ದಿವಂಗತ ಮನೋಹರ್ ಪರಿಕ್ಕರ್ ಪ್ರತಿನಿಧಿಸುವ ಕ್ಷೇತ್ರದಲ್ಲಿ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಗೆ ನೀವು ಟಿಕೆಟ್ ನೀಡುತ್ತೀರಾ ಎಂದು ತರಾಟೆಗೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಡಿಕೆಶಿಯನ್ನು ಭೇಟಿಯಾದ ಆನಂದ್ ಸಿಂಗ್
ಮನೋಹರ್ ಪರಿಕ್ಕರ್ ಅವರು ಗೋವಾದಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರು. ಅವರು ಕಳೆದ 25 ವರ್ಷದಿಂದ ಪಣಜಿ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಅವರು 2019ರಲ್ಲಿ ನಿಧನರಾದರು. ಪರಿಕ್ಕರ್ ಅವರ ಮರಣದ ನಂತರ ನಡೆದ ಉಪಚುನಾವಣೆಯಲ್ಲಿ, ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಬಾಬುಷ್ ಮೊನ್ಸೆರೇಟ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದರು. ಆದರೆ ಅವರು ನಂತರದಲ್ಲಿ ಬಿಜೆಪಿಗೆ ಪಕ್ಷಾಂತರವಾದರು. ಫೆ.14ರಂದು ಗೋವಾ ವಿಧಾನಸಭಾ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾಸುರ: ಎಚ್. ವಿಶ್ವನಾಥ್