ನವದೆಹಲಿ: ಉತ್ತರ ಪ್ರದೇಶ, ಉತ್ತರಾಖಂಡ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ನಿಚ್ಚಳ ಬಹುಮತ ಬಂದಿದ್ದು ಈಗಾಗ್ಲೇ ಅಧಿಕಾರ ಹಿಡಿಯಲು ಸನ್ನದ್ಧವಾಗಿದೆ. ಆದ್ರೆ ಗೋವಾ ಮತ್ತು ಮಣಿಪುರದಲ್ಲಿ 2ನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಸಣ್ಣಪುಟ್ಟ ಪಕ್ಷಗಳ ಬೆಂಬಲ ಪಡೆದು ಎರಡೂ ಕಡೆ ಸರ್ಕಾರ ರಚಿಸಲು ಸರ್ಕಸ್ ಮಾಡ್ತಿದೆ.
ಗೋವಾದಲ್ಲಿ 13 ಸ್ಥಾನ ಗೆದ್ದಿರುವ ಬಿಜೆಪಿ ಹೊಸ ಸರ್ಕಾರ ರಚಿಸಲು ಅವಕಾಶ ಕೋರಿ ರಾಜ್ಯಪಾಲರಾದ ಮೃದುಲಾ ಸಿನ್ಹಾರಿಗೆ ಮನವಿ ಸಲ್ಲಿಸಿದೆ. ಮನವಿ ಪುರಸ್ಕರಿಸಿರುವ ರಾಜ್ಯಪಾಲರು ಮನೋಹರ್ ಪರಿಕ್ಕರ್ ಅವರನ್ನು ಗೋವಾ ಮುಖ್ಯಮಂತ್ರಿ ಎಂದು ಘೋಷಿಸಿದ್ದಾರೆ. ಜೊತೆಗೆ ಪ್ರಮಾಣ ವಚನ ಸ್ವೀಕರಿಸಿದ 15 ದಿನಗಳಲ್ಲಿ ಬಹುಮತ ಸಾಬೀತು ಪಡಿಸಲು ಪರಿಕ್ಕರ್ ಅವರಿಗೆ ಸೂಚಿಸಿದ್ದಾರೆ.
Advertisement
Advertisement
ಗೋವಾದಲ್ಲಿ ಬಹುಮತಕ್ಕೆ ಬೇಕಾಗಿರುವುದು 21 ಸದಸ್ಯರ ಸಂಖ್ಯಾಬಲ. ಎನ್‍ಸಿಪಿ 1, ಎಂಜಿಪಿ 3, ಜಿಎಫ್‍ಪಿ 3, ಇಬ್ಬರು ಪಕ್ಷೇತರರನ್ನು ಸೇರಿಸಿಕೊಂಡು ಸರ್ಕಾರ ರಚಿಸಲು ಬಿಜೆಪಿ ಮುಂದಾಗಿದೆ. ಇನ್ನು ಗೋವಾದಲ್ಲಿ 17 ಸ್ಥಾನಗಳನ್ನು ಪಡೆದು ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಿದೆ ಅಂತ ಉನ್ನತ ಮೂಲಗಳು ತಿಳಿಸಿವೆ.
Advertisement
ಮಣಿಪುರದಲ್ಲಿ 21 ಸ್ಥಾನಗಳನ್ನ ಗೆದ್ದಿರುವ ಬಿಜೆಪಿಗೆ ಬಹುಮತ ಸಾಬೀತುಪಡಿಸಲು 31 ಸದ್ಯಸರ ಅಗತ್ಯವಿದೆ. ಇತರೆ ಪಕ್ಷದ 10 ಮಂದಿ ಸದಸ್ಯರ ಬೆಂಬಲ ಪಡೆಯಲು ಬಿಜೆಪಿ ಸರ್ಕಸ್ ಮಾಡ್ತಿದೆ. ಇಲ್ಲಿಯೂ ಬಿಜೆಪಿಗೆ ಸ್ಪಷ್ಟ ಬೆಂಬಲ ಸಿಕ್ಕಿದ್ರೆ ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಹಿಡಿದಂತಾಗುತ್ತದೆ.