ಬೆಂಗಳೂರು: ನಗರದ ದಕ್ಷಿಣ ವಿಭಾಗ ಅಬಕಾರಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 5 ಲಕ್ಷ ರೂ. ಮೌಲ್ಯದ 144 ಬಾಟಲಿ ಗೋವಾ (Goa) ಲಿಕ್ಕರ್ ಪತ್ತೆಯಾಗಿದ್ದು, ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕತ್ರಿಗುಪ್ಪೆ (Katriguppe) ನಿವಾಸಿ ಪುರುಷೋತ್ತಮ್ ಎಂದು ಗುರುತಿಸಲಾಗಿದೆ.
ಆರೋಪಿ ಗೋವಾದಿಂದ ಕಡಿಮೆ ಬೆಲೆಗೆ ಮದ್ಯ ತರಿಸಿಕೊಳ್ಳುತ್ತಿದ್ದ. ಗೋವಾದಲ್ಲಿರುವ ಅಂಗಡಿಯವರ ಸಂಪರ್ಕದ ಮೇರೆಗೆ ಬೆಂಗಳೂರಿಗೆ ಮದ್ಯ ತರಿಸಿಕೊಳ್ಳುತ್ತಿದ್ದ. ತನಗೆ ಬೇಕಾದಾಗಲೆಲ್ಲಾ ತಿಳಿಸಿ ಬಸ್‌ನಲ್ಲಿ ಮದ್ಯದ ಬಾಟಲ್ ಇಡುವಂತೆ ಹೇಳುತ್ತಿದ್ದ. ಬಳಿಕ ಇಲ್ಲಿಗೆ ಬರುತ್ತಿದ್ದಂತೆ ಇಳಿಸಿಕೊಳ್ಳುತ್ತಿದ್ದ. ನಂತರ ಮನೆಗೆ ತೆಗೆದುಕೊಂಡು ಹೋಗಿ ಸ್ಟಾಕ್ ಮಾಡುತ್ತಿದ್ದ. ಇದನ್ನು ಕಡಿಮೆ ಬೆಲೆಗೆ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ.ಇದನ್ನೂ ಓದಿ: ಸತತ 35 ಗಂಟೆಗಳ ಇಡಿ ದಾಳಿ ಅಂತ್ಯ – 2 ದಿನ, 5 ಅಧಿಕಾರಿಗಳಿಂದ ಮಹತ್ವದ ದಾಖಲೆ ಸಂಗ್ರಹ!
Advertisement
Advertisement
ಅ.27 ರಂದು ಪುರುಷೋತ್ತಮ್ ದ್ವಿಚಕ್ರ ವಾಹನ ನಿಲ್ಲಿಸಿಕೊಂಡು ಬನಶಂಕರಿ ಎರಡನೇ ಹಂತದಲ್ಲಿ ನಿಂತಿದ್ದ. ಆತನ ಚಲನವಲನ ಅಬಕಾರಿ ಅಧಿಕಾರಿಗಳಿಗೆ ಅನುಮಾನ ಹುಟ್ಟಿಸಿತ್ತು. ಈ ವೇಳೆ ಬ್ಯಾಗ್ ತೆಗೆದು ಪರಿಶೀಲಿಸಿದಾಗ ಮದ್ಯದ ಬಾಟಲ್ ಪತ್ತೆಯಾಗಿದೆ. ಬಾಟಲ್ ಮೇಲೆ ಫಾರ್ ಸೇಲ್ ಇನ್ ಗೋವಾ ಓನ್ಲಿ ಎಂದು ನಮೂದಾಗಿದ್ದು ಕಂಡು ಅವುಗಳು ಗೋವಾದಲ್ಲಿ ತಯಾರಿಸಲಾಗಿದ್ದ ಮದ್ಯದ ಬಾಟಲ್ ಎಂದು ತಿಳಿದಿದೆ.
Advertisement
ಬಳಿಕ ಆತನ ಮೊಬೈಲ್ ಪರಿಶೀಲಿಸಿದಾಗ ಗೋವಾ ರಾಜ್ಯದ ಮದ್ಯದ ಅಂಗಡಿ ಜೊತೆಗಿನ ನಂಟು ಬಯಲಾಗಿದೆ. ಜೊತೆಗೆ ಮದ್ಯ ತರಿಸಿದ್ದ ಬಿಲ್ಲುಗಳು ಕೂಡ ಪತ್ತೆಯಾಗಿದೆ. ನಂತರ ಕತ್ರಿಗುಪ್ಪೆ ಮನೆಗೆ ಕರೆದೊಯ್ದು ಶೋಧಿಸಿದಾಗ ಅಕ್ರಮ ಮದ್ಯದ ಬಾಟಲ್‌ಗಳು ಇರುವುದು ತಿಳಿದುಬಂದಿದೆ. ಮನೆಯಲ್ಲಿದ್ದ ಮದ್ಯದ ಬಾಟಲ್‌ಗಳನ್ನು ನೋಡಿ ಅಬಕಾರಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ.
Advertisement
ಸದ್ಯ ಅಬಕಾರಿ ಕಾಯ್ದೆ 1965ರ ಕಲಂ 11, 14, 15, 38(ಎ), 43(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಬೆಳಕಿನ ಹಬ್ಬ – ಶ್ರೀರಾಮನ ಪುನರಾಗಮನ!