ಪಣಜಿ: ಬಿಜೆಪಿ ನೇತೃತ್ವದ ಗೋವಾ ಸರ್ಕಾರದಲ್ಲಿ ಸಚಿವ ಮೈಕೆಲ್ ಲೋಬೋ ಅವರು ಶಾಸಕ ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಗೋವಾ ಚುನಾವಣೆಗೆ ಕೇವಲ ಒಂದು ತಿಂಗಳಿರುವಾಗಲೇ ಬಿಜೆಪಿಗೆ ಭಾರೀ ಹೊಡೆತ ಬಿದ್ದಂತಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಾಮಾನ್ಯ ಜನರ ಪಕ್ಷವಲ್ಲವಾಗಿ ಉಳಿದಿಲ್ಲ. ಇದರಿಂದಾಗಿ ನಾನು ಶಾಸಕ ಹಾಗೂ ಸಚಿವ ಸ್ಥಾನವೆರಡಕ್ಕೂ ರಾಜೀನಾಮೆ ನೀಡಿದ್ದೇನೆ. ಇದರ ಜೊತೆಗೆ ನಾನು ಬಿಜೆಪಿ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತಿದ್ದೇನೆ. ಯಾವ ಪಕ್ಷಕ್ಕೆ ಸೇರಬೇಕೆನ್ನುವುದನ್ನು ನಾನು ಮುಂದಿನ ದಿನಗಳಲ್ಲಿ ತೀರ್ಮಾನಿಸುತ್ತೇನೆ ಎಂದ ಅವರು, ಬಿಜೆಪಿ ಸಾಮಾನ್ಯ ಜನರ ಪಕ್ಷವಲ್ಲ ಎಂದು ಮತದಾರರು ತಿಳಿಸಿದ್ದಾರೆ ಎಂದು ತಮ್ಮ ರಾಜೀನಾಮೆಯನ್ನು ಸಮರ್ಥಿಸಿಕೊಂಡಿದ್ದಾರೆ.
Advertisement
Advertisement
ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದರು, ಕಾಂಗ್ರೆಸ್‌ಗೆ ಸೇರುತ್ತಾರೋ ಅಥವಾ ಇತರೆ ಪಕ್ಷಕ್ಕೆ ಸೇರುತ್ತಾರೋ ಎಂನ್ನುವುದರ ಕುರಿತು ಅಧಿಕೃತವಾಗಿ ಬಹಿರಂಗ ಪಡಿಸಿಲ್ಲ. ಬದಲಾಗಿ ನಾನು ಯಾವ ಪಕ್ಷಕ್ಕೆ ಸೇರುತ್ತೇನೋ, ಆ ಪಕ್ಷದಲ್ಲಿ ಅತಿ ಹೆಚ್ಚು ಮತದಿಂದ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಫ್ಘಾನಿಸ್ತಾನಕ್ಕೆ ಭಾರತದ ನೆರವು – ಇರಾನ್ ಸಹಾಯ
Advertisement
Advertisement
ಗೋವಾ ರಾಜ್ಯದ ತ್ಯಾಜ್ಯ ನಿವಹಣಾ ಇಲಾಖೆಯ ಉಸ್ತುವಾರಿಯನ್ನು ಇವರು ನೋಡಿಕೊಳ್ಳುತ್ತಿದ್ದರು. ಇತ್ತೀಚೆಗಷ್ಟೇ ಮೈಕೆಲ್ ಲೋಬೋ ಅವರು ಬಹಿರಂಗವಾಗಿ ತಮ್ಮ ಪಕ್ಷದ ಬಗ್ಗೆ ಟೀಕಿಸುತ್ತಿದ್ದರು. ಇದು ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕಟ್ಟಿದ್ದ ಪಕ್ಷವಾಗಿ ಉಳಿದಿಲ್ಲ ಎಂದಿದ್ದರು. 2019ರಲ್ಲಿ ಮನೋಹರ್ ಪರಿಕ್ಕರ್ ಅವರ ಸಾವಿನ ನಂತರ ಅಧಿಕಾರ ವಹಿಸಿಕೊಂಡ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರೊಂದಿಗೆ ಅವರು ಭಿನ್ನಾಭಿಪ್ರಾಯ ಹೊಂದಿದ್ದರು. ಇದನ್ನೂ ಓದಿ: ನನ್ನನ್ನು ನೋಡಿದ್ರೆ ಕೊರೊನಾ ಇದೆ ಅಂತ ಅನ್ನಿಸುತ್ತಾ?: ಡಿ.ಕೆ. ಶಿವಕುಮಾರ್