– ಇಂಚಿಂಚೂ ಘಟನಾ ವಿವರ ಪಡೆದ ಮೋದಿ
ಪಣಜಿ: ಉತ್ತರ ಗೋವಾದ ಅರ್ಪೋರಾ ನೈಟ್‌ಕ್ಲಬ್ ಅಗ್ನಿ ದುರಂತದಲ್ಲಿ (Goa Nightclub Fire) 25 ಮಂದಿ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್‌ನ ಮ್ಯಾನೇಜರ್‌ನನ್ನ (Nightclub Manager) ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಕ್ಲಬ್ ಮಾಲೀಕನ ವಿರುದ್ಧವೂ ಅರೆಸ್ಟ್ ವಾರಂಟ್ ಜಾರಿಗೊಳಿಸಿದ್ದಾರೆ ಎಂದು ವರದಿಯಾಗಿದೆ.
Fire at a restaurant in North Goa’s Arpora, claiming 25 lives | Office of the Collector, North Goa issues emergency numbers in order to ensure effective monitoring, incident response and public grievance redressal. pic.twitter.com/YERGVRhthG
— ANI (@ANI) December 7, 2025
ಪ್ರಕರಣ ಸಂಬಂಧ ಅರ್ಪೋರಾ ಠಾಣೆಯಲ್ಲಿ (Arpora Police Station) ಎಫ್‌ಐಆರ್ ದಾಖಲಾಗಿದ್ದು, ಅಗ್ನಿ ಸುರಕ್ಷತಾ ನಿಯಮ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ ಪ್ರಧಾನ ವ್ಯವಸ್ಥಾಪಕನನ್ನ ಬಂಧಿಸಲಾಗಿದ್ದು, ಮಾಲೀಕನ ವಿರುದ್ಧವೂ ವಾರಂಟ್ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: ಗೋವಾ ನೈಟ್ ಕ್ಲಬ್ ಅಗ್ನಿ ದುರಂತ – ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
ಮ್ಯಾಜಿಸ್ಟ್ರೇಟ್ ತನಿಖೆಗೆ ಗೋವಾ ಸಿಎಂ ಆದೇಶ
ಅರ್ಪೋರಾದ ನೈಟ್ ಕ್ಲಬ್ ಅಗ್ನಿ ಅವಘಡ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಸಿಎಂ ಡಾ. ಪ್ರಮೋದ್ ಸಾವಂತ್ (Pramod Sawant) ಆದೇಶಿಸಿದ್ದಾರೆ. ಈಗಾಗಲೇ ಜನರಲ್ ಮ್ಯಾನೇಜರ್‌ನನ್ನ ಬಂಧಿಸಿದ್ದು, ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲಿಸಿ ವಾರಂಟ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಕ್ಲಬ್ ಅಗ್ನಿ ಸುರಕ್ಷತಾ ಮಾನದಂಡಗಳನ್ನ ಪಾಲಿಸಿದೆಯೇ ಎಂಬುದನ್ನೂ ಕೂಡ ಪತ್ತೆ ಮಾಡಬೇಕಿದೆ. ಕ್ಲಬ್ ಯಾವ್ಯಾವ ಅನುಮತಿಗಳನ್ನ ಪಡೆದುಕೊಂಡಿದೆ, ಯಾರು ಅನುಮತಿ ಕೊಟ್ಟಿದ್ದಾರೆ ಎಲ್ಲವನ್ನೂ ಬಯಲಿಗೆಳೆಯಬೇಕು ಎಂದು ಸೂಚಿಸಿದ್ದಾರೆ.
ಇಂಚಿಂಚೂ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನೆನೆದು ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ (Narendra Modi) ಘಟನೆಯ ಸಂಪೂರ್ಣ ವಿವರ ಪಡೆದುಕೊಂಡಿದ್ದಾರೆ. ಅಲ್ಲದೇ ಕೇಂದ್ರದಿಂದ ಪರಿಹಾರ ಸಹ ಘೋಷಣೆ ಮಾಡಿದ್ದು, ಸಾಧ್ಯವಿರುವ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ ಎಂದು ಪ್ರಮೋದ್ ಸಾವಂತ್ ಹೇಳಿದ್ದಾರೆ. ಇದನ್ನೂ ಓದಿ: ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ – 23 ಪ್ರವಾಸಿಗರು ಸಜೀವ ದಹನ; ಸಿಲಿಂಡರ್ ಸ್ಫೋಟ ಶಂಕೆ
ಏನಿದು ದುರಂತ?
ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಫೇಮಸ್ ನೈಟ್ ಕ್ಲಬ್‌ನಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಕ್ಲಬ್ ಮುಚ್ಚಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗ ಅಡುಗೆ ಮನೆಯ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಘಟನೆಯಲ್ಲಿ ನಾಲ್ವರು ಪ್ರವಾಸಿಗರು, 14 ಮಂದಿ ಕ್ಲಬ್ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನೂ 7 ಮಂದಿ ಗುರುತು ಪತ್ತೆಯಾಗಿ ತನಿಖೆ ನಡೆಯುತ್ತಿದೆ.
ಸದ್ಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಂಡಿದೆ. ಇದನ್ನೂ ಓದಿ: ರಕ್ಷಣಾ ಒಪ್ಪಂದ; ‘5 ಡೆಡ್ಲಿ ವೆಪನ್ಸ್’- ರಷ್ಯಾದ ಶಸ್ತ್ರಾಸ್ತ್ರಗಳು ಭಾರತದ ಮಿಲಿಟರಿ ಶಕ್ತಿಯ ಬೆನ್ನೆಲುಬಾಗಿದ್ದು ಹೇಗೆ?


