-ಗಾಯಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ
-ಸಾವಿನ ಸಂಖ್ಯೆ 25ಕ್ಕೆ ಏರಿಕೆ
ಪಣಜಿ: ಗೋವಾ ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಿಂದಾಗಿ 25 ಜನರು ಬಲಿಯಾಗಿದ್ದಾರೆ. ಈ ಸಂಬಂಧ ಪ್ರಧಾನಿ ಮೋದಿ (PM Modi) ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಕುರಿತು PMO ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಫೇಮಸ್ ನೈಟ್ ಕ್ಲಬ್‌ನಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ 2 ಲಕ್ಷ ರೂ. ಹಾಗೂ ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಪರಿಸ್ಥಿತಿಯ ಬಗ್ಗೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಜಿ ಅವರೊಂದಿಗೆ ಮಾತನಾಡಿದ್ದೇನೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯ ನೀಡುತ್ತಿದೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ – 23 ಪ್ರವಾಸಿಗರು ಸಜೀವ ದಹನ; ಸಿಲಿಂಡರ್ ಸ್ಫೋಟ ಶಂಕೆ
ಇನ್ನೂ ಅವಘಡದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 25ಕ್ಕೆ ಏರಿಕೆಯಾಗಿದ್ದು, ಗಾಯಳುಗಳಿಗೆ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
An ex-gratia of Rs. 2 lakh from PMNRF will be given to the next of kin of each deceased in the mishap in Arpora, Goa. The injured would be given Rs. 50,000: PM @narendramodi https://t.co/BcS0jYnvVx
— PMO India (@PMOIndia) December 7, 2025
ಏನಿದು ಘಟನೆ?
ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಫೇಮಸ್ ನೈಟ್ ಕ್ಲಬ್‌ನಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಕ್ಲಬ್ ಮುಚ್ಚಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗ ಅಡುಗೆ ಮನೆಯ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಅನ್ನೋ ಶಂಕೆಯಿದೆ. ಸ್ಫೋಟದ ತೀವ್ರತೆಗೆ ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡಿದ್ದು, ಅವಘಡಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.ಇದನ್ನೂ ಓದಿ: ಹೊಸ ವರ್ಷದ ಹಿನ್ನೆಲೆ ಬೆಂಗಳೂರು ಪೊಲೀಸರು ಅಲರ್ಟ್ – ಬಾಂಬ್ ಸ್ಕ್ವಾಡ್ ಸಿಬ್ಬಂದಿಗೆ ವಿಶೇಷ ತರಬೇತಿ

