ಪಣಜಿ: ಗೋವಾಕ್ಕೆ ನೀವು ಮುಂದೆ ಹೋಗ್ತೀರಾ. ಹಾಗಾದ್ರೆ ಹುಷಾರಾಗಿರಿ. ಹೌದು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದನ್ನು ನಿಷೇಧಿಸಲು ಗೋವಾ ಸರ್ಕಾರ ಮುಂದಾಗಿದೆ.
ಕೆಲವರು ರಸ್ತೆ ಮಾರ್ಗದಲ್ಲಿ ಕುಡಿಯುತ್ತಾ ಕುಳಿತಿರುತ್ತಾರೆ ಜೊತೆಗೆ ಕುಡಿದ ನಂತರ ಬಾಟಲ್‍ಗಳನ್ನು ರಸ್ತೆಯಲ್ಲಿಯೇ ಬಿಸಾಡುತ್ತಾರೆ. ಇದರಿಂದ ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಈ ಸಮಸ್ಯೆ ನಿವಾರಣೆಗಾಗಿ ಸಭೆ ಕರೆದು ಅಧಿಕೃತ ಸುತ್ತೋಲೆಯನ್ನು ಹೊರಡಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
Advertisement
`ಯಾರು ಕುಡಿಯಲು ಬಯಸುತ್ತಾರೋ ಅವರು ಬಾರ್‍ನ ಒಳಗೆ ಕುಡಿಯಲಿ. ಸಾರ್ವಜನಿಕ ಸ್ಥಳಗಳಲ್ಲಿ ಅಲ್ಲ’. ಮುಂದಿನ 15 ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ನಿಷೇಧಿಸುವಂತೆ ನಾನು ಸರ್ಕಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ ಎಂದು `ಸ್ವಚ್ಛ ಭಾರತ’ ಕಾರ್ಯಕ್ರಮವೊಂದರಲ್ಲಿ ತಿಳಿಸಿದರು.
Advertisement
ಮದ್ಯಪಾನ ಅಂಗಡಿಗಳು ಸಮೀಪದ ಸಾರ್ವಜನಿಕ ಸ್ಥಳಗಳಲ್ಲಿ ಕುಡಿಯಲು ಅವಕಾಶ ಮಾಡಿಕೊಟ್ಟರೆ ಅಂತಹ ಶಾಪ್‍ಗಳಿಗೆ ಸರ್ಕಾರ ದಂಡ ವಿಧಿಸಲಾಗುತ್ತದೆ ಅಥವಾ ಪರವಾನಗಿಯನ್ನು ರದ್ದು ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
Advertisement
ಕಳೆದ ವರ್ಷ ಗೋವಾ ಸರ್ಕಾರ 1964ರ ಅಬಕಾರಿ ಸುಂಕ ಕಾಯ್ದೆಗೆ ತಿದ್ದುಪಡಿ ಮಾಡಿ ಕೆಲವು ಆಯ್ದ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಕಡಲ ತೀರಗಳಲ್ಲಿ ಮದ್ಯಪಾನವನ್ನು ನಿಷೇಧಿಸಿತ್ತು. ಅಷ್ಟೇ ಅಲ್ಲದೇ ಈ ಸ್ಥಳಗಳಲ್ಲಿ ಮದ್ಯಪಾನ ಮಾಡಿದವರಿಗೆ ದಂಡ ವಿಧಿಸುವ ಅಂಶವನ್ನು ಸೇರಿಸಿತ್ತು.
Advertisement
ಮೇ ತಿಂಗಳಿನಿಂದ ಪೊಲೀಸರು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವವರ ವಿರುದ್ಧ ಶಿಸ್ತುಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಕೆಲವರನ್ನು ಬಂಧಿಸುತ್ತಿದ್ದಾರೆ.