ಪಣಜಿ: ಗೋವಾ ಮತ್ತು ಉತ್ತರಾಖಂಡದ ಜನರಿಗೆ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮನವಿ ಮಾಡಿದರು. ವಿಧಾನಸಭೆ ಚುನಾವಣೆಗೆ ಒಂದು ದಿನ ಮುಂಚಿತವಾಗಿ ಕಲ್ಯಾಣ ಮತ್ತು ಅಭಿವೃದ್ಧಿ ಸಂಬಂಧಿತ ಕೆಲಸಗಳನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ.
ಉತ್ತರಾಖಂಡದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ 10 ವರ್ಷ ಆಡಳಿತ ನಡೆಸಿವೆ. ಗೋವಾದಲ್ಲಿ ಕಾಂಗ್ರೆಸ್ 27 ವರ್ಷ, ಬಿಜೆಪಿ 15 ವರ್ಷ ಅಧಿಕಾರದಲ್ಲಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಗೋವಾ ಮತ್ತು ಉತ್ತರಾಖಂಡದ ಜನರನ್ನು ಲೂಟಿ ಮಾಡಿದೆ. ನೀವು ಅವರಿಗೆ ಮತ್ತೊಮ್ಮೆ ಮತ ಹಾಕಿದರೆ, ಅವರು ನಿಮ್ಮನ್ನು ಲೂಟಿ ಮಾಡುವುದನ್ನು ಮುಂದುವರಿಸುತ್ತಾರೆ. ಈ ಬಾರಿ ಹೊಸ ಪಕ್ಷ (ಎಎಪಿ) ಇದೆ. ನಾವು ಕಲ್ಯಾಣ, ಅಭಿವೃದ್ಧಿಗೆ ಸಂಬಂಧಿಸಿದ ಕೆಲಸಗಳನ್ನು ನೀಡುತ್ತೇವೆ. ಆಮ್ ಆದ್ಮಿ ಪಕ್ಷಕ್ಕೆ ಅವಕಾಶ ನೀಡಿ ಎಂದಿದ್ದಾರೆ.
Advertisement
Advertisement
ಶಿಕ್ಷಣ, ಆರೋಗ್ಯ ಮತ್ತು ವಿದ್ಯುತ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದೆಹಲಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿ ಮಾತನಾಡಿದ ಕೇಜ್ರಿವಾಲ್ ಅವರು, ಎರಡೂ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದರೆ ತಾವು ಅದೇ ರೀತಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್, ರಾಘವ್ ಚಡ್ಡಾ ಪಂಜಾಬ್ ಲೂಟಿ ಮಾಡಲು ಬಂದಿದ್ದಾರೆ: ಚರಣ್‍ಜಿತ್ ಸಿಂಗ್ ಚನ್ನಿ
Advertisement
Advertisement
ಗುಡ್ಡಗಾಡು ರಾಜ್ಯದ ಎಲ್ಲಾ ಹಳ್ಳಿಗಳಲ್ಲಿ ಆರೋಗ್ಯ ಸೇವೆಗಳು, ಶಾಲೆಗಳನ್ನು ಸ್ಥಾಪಿಸುವ ಮತ್ತು ಉದ್ಯೋಗ ಹುಡುಕಾಟದಲ್ಲಿರುವ ಯುವಕರು ರಾಜ್ಯದಿಂದ ವಲಸೆ ಹೋಗುವುದನ್ನು ತಡೆಯಲು ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದಾಗಿ ಭರವಸೆ ನೀಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ 10 ವರ್ಷಗಳ ಕಾಲದಿಂದ ಗಣಿಗಾರಿಕೆ ನಿಂತಿದೆ, ಆದ್ದರಿಂದ ಅವರಿಗೆ ಮತ ಹಾಕುವುದರಲ್ಲಿ ಅರ್ಥವಿಲ್ಲ. ಎಎಪಿಗೆ ಮತ ನೀಡಿ, ನಮಗೆ ಅವಕಾಶ ನೀಡಿ. 6 ತಿಂಗಳಲ್ಲಿ ಗಣಿಗಾರಿಕೆ ಆರಂಭಿಸುತ್ತೇವೆ ಎಂದಿದ್ದಾರೆ.
ಗೋವಾದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಅಮಿತ್ ಪಾಲೇಕರ್ ಅವರು, “ಪ್ರಾಮಾಣಿಕ” ಮತ್ತು ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಉತ್ತರಾಖಂಡ ಸಿಎಂ ಅಭ್ಯರ್ಥಿ, ಕರ್ನಲ್ (ನಿವೃತ್ತ) ಅಜಯ್ ಕೊಥಿಯಾಲ್ 10,000 ಮಕ್ಕಳಿಗೆ ತರಬೇತಿ ಕೊಡಿಸಿ ಮತ್ತು ಅವರನ್ನು ಸೇನೆಗೆ ಸೇರಿಸಿದ್ದಾರೆ ಎಂದು ಹೊಗಳಿದ್ದಾರೆ. ಫೆಬ್ರವರಿ 14 ರಂದು ಗೋವಾದ 40 ವಿಧಾನಸಭಾ ಕ್ಷೇತ್ರಗಳು ಮತ್ತು ಉತ್ತರಾಖಂಡದ 70 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಬಿಜೆಪಿ ಸುಳ್ಳುಗಾರರ ಪಕ್ಷ: ಅಖಿಲೇಶ್ ಯಾದವ್