ತೆಲುಗು- ಮಲಯಾಳಂ (Malyalam) ಸಿನಿಮಾರಂಗದಲ್ಲಿ ಆಕ್ಟೀವ್ ಆಗಿರುವ ಹನಿ ರೋಸ್ (Honey Rose) ಅವರು ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಈಗ ತಮ್ಮ ಮುಖಕ್ಕೆ ಕಾಸ್ಮೆಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾರೆ ಎಂಬ ಟೀಕೆ ಎದುರಾಗಿದೆ. ಅದಕ್ಕೆ ಸ್ವತಃ ನಟಿ ಹನಿ ಉತ್ತರ ನೀಡಿದ್ದಾರೆ.
ಮಾನಸ್ಟರ್, ಬಿಗ್ ಬ್ರದರ್, ವೀರ ಸಿಂಹ ರೆಡ್ಡಿ (Veera Simha Reddy) ಸಿನಿಮಾಗಳಲ್ಲಿ ನಾಯಕಿಯಾಗಿ ಹನಿ ರೋಸ್ ನಟಿಸಿದ್ದಾರೆ. ಮೋಹನ್ ಲಾಲ್, ಬಾಲಯ್ಯ (Balayya) ಅವರಂತಹ ದಿಗ್ಗಜ ನಟರಿಗೆ ನಾಯಕಿಯಾಗಿ ಮೋಡಿ ಮಾಡಿದ್ದಾರೆ. ನೋಡಲು ಫಿಟ್ ಮತ್ತು ಮುದ್ದಾಗಿರೋ ಹನಿ ರೋಸ್ ಅವರು ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ. ಅದಕ್ಕೆ ಅವರು ಇಷ್ಟು ಮುದ್ದಾಗಿ ಕಾಣ್ತಿದ್ದಾರೆ ಅಂತೆಲ್ಲಾ ಸುದ್ದಿ ಹರಿದಾಡಿತ್ತು. ಅದಕ್ಕೆಲ್ಲಾ ನಟಿ ಮೌನ ಮುರಿದಿದ್ದಾರೆ. ಸಂದರ್ಶನವೊಂದರಲ್ಲಿ ಫೇಸ್ ಸರ್ಜರಿ ಟೀಕೆ ಉತ್ತರ ನೀಡಿದ್ದಾರೆ. ಇದನ್ನೂ ಓದಿ:‘ಲಕ್ಷ್ಮಿ ಬಾರಮ್ಮ’ ಕೀರ್ತಿ ಪಾತ್ರಕ್ಕೆ ಗುಡ್ ಬೈ ಹೇಳಿದ ತನ್ವಿ ರಾವ್
ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಆಗಿರುವ ನಟಿ ಹನಿ, ಒಂದಲ್ಲಾ ಒಂದು ಫೋಟೋಶೂಟ್‌ನಿಂದ ಗಮನ ಸೆಳೆಯುತ್ತಿರುತ್ತಾರೆ. ಅವರ ಬೋಲ್ಡ್ ಫೋಟೋಗಾಗಿಯೇ ಕಾಯುವ ಫ್ಯಾನ್ಸ್ ಇದ್ದಾರೆ. ಹನಿ ರೋಸ್ ಕಾಸ್ಮೆಟಿಕ್ ಸರ್ಜರಿ ಮಾಡಿಸಿಕೊಂಡಿದ್ದು, ಇದೇ ಅವರ ಸೀಕ್ರೆಟ್ ಎಂದು ಅನೇಕರು ಆರೋಪಿಸಿದ್ರು. ಈಗ ನಟಿ ತಾನು ಯಾವುದೇ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನನಗೆ ದೇವರು ಈ ಅಂದ ಕೊಟ್ಟಿದ್ದು ಬಿಟ್ರೆ ಬೇರೇನೂ ಇಲ್ಲ ಎಂದಿದ್ದಾರೆ. ನಾನು ಯಾವುದೇ ಸರ್ಜರಿ ಮಾಡಿಸಿಕೊಂಡು ಸೌಂದರ್ಯ ಹೆಚ್ಚಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸದ್ಯ ‘ರಾಚೆಲ್’ (Rachel) ಎಂಬ ಮಹಿಳಾ ಪ್ರಧಾನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಭಿನ್ನವಾಗಿರುವ ಪಾತ್ರದ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ. ನಟಿ ಫಸ್ಟ್ ಲುಕ್ ಕೂಡ ಅಭಿಮಾನಿಗಳ ಗಮನ ಸೆಳೆದಿದೆ. ಕನ್ನಡ, ಮಲಯಾಳಂ ಸೇರಿದಂತೆ ಬಹುಭಾಷೆಗಳಲ್ಲಿ ರಾಚೆಲ್ ಸಿನಿಮಾ ಮೂಡಿ ಬರಲಿದೆ.