LatestMain PostNational

ಪ್ರತಿಷ್ಠಾಪನೆಯಾಗಿದ್ದ ದುರ್ಗಾ ದೇವಿಯ ವಿಗ್ರಹ ವಿರೂಪ – ಇಬ್ಬರು ಮಹಿಳೆಯರು ಅರೆಸ್ಟ್

ಹೈದರಾಬಾದ್: ದುರ್ಗಾ ದೇವಿಯ ವಿಗ್ರಹವನ್ನು (Goddess Durga Idol) ವಿರೂಪಗೊಳಿಸಿದ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಘಟನೆ ಹೈದರಾಬಾದ್‍ನಲ್ಲಿ (Hyderabad) ನಡೆದಿದೆ.

ಇಬ್ಬರು ಮಹಿಳೆಯರು (Women) ನಗರದ ಖೈರತಾಬಾದ್ ಪ್ರದೇಶದ ದುರ್ಗಾ ಮಂಟಪಕ್ಕೆ ನುಗ್ಗಿದ್ದಾರೆ. ಆ ಮಹಿಳೆಯರಲ್ಲಿ ಒಬ್ಬಾಕೆ ಸ್ಪ್ಯಾನರ್‌ನಿಂದ ವಿಗ್ರಹದ ಮೇಲೆ ದಾಳಿ ಮಾಡಿದ್ದಾಳೆ. ಅಷ್ಟೇ ಅಲ್ಲದೇ ಆಕೆಯನ್ನು ತಡೆಯಲು ಮುಂದಾದ ಸ್ಥಳೀಯರ ಮೇಲೂ ಇಬ್ಬರು ಮಹಿಳೆಯರು ಸೇರಿ ಹಲ್ಲೆ ನಡೆಸಿದ್ದಾರೆ.

ಘಟನೆ ವೇಳೆ ದುರ್ಗಾ ದೇವಿಯ ಪಕ್ಕದಲ್ಲಿರುವ ಸಿಂಹವನ್ನು ವಿರೂಪಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಆರೋಪಿಗಳಿಬ್ಬರನ್ನೂ ಸೈದನಾಬಾದ್ ಪೊಲೀಸರು ಬಂಧಿಸಲಾಗಿದೆ (Arrest). ಇದನ್ನೂ ಓದಿ: ಪ್ರಮೋದಾ ದೇವಿ ಮುಂದೆ ಮಂಡಿಯೂರಿ ನಮಸ್ಕರಿಸಿದ ಸುಧಾಮೂರ್ತಿ – ಫೋಟೋ ವೈರಲ್

ಘಟನೆಗೆ ಸಂಬಂಧಿಸಿ ಕೇಂದ್ರ ವಲಯದ ಡಿಸಿಪಿ ರಾಜೇಶ್ ಚಂದ್ರ ಮಾತನಾಡಿ, ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಇಬ್ಬರು ಮಹಿಳೆಯರು ನವರಾತ್ರಿ ಪ್ರಯುಕ್ತ ಪ್ರತಿಷ್ಠಾಪಿಸಲಾಗಿದ್ದ ದುರ್ಗಾ ದೇವಿಯ ಮಂಟಪಕ್ಕೆ ನುಗ್ಗಿ ವಿಗ್ರಹವನ್ನು ವಿರೂಪಗೊಳಿಸಿದ್ದಾರೆ. ಈ ಕುರಿತು ಸ್ಥಳೀಯರಿಂದ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಆ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.

ವಿಚಾರಣೆಯ ನಂತರ ಇಬ್ಬರು ಮಹಿಳೆಯರು ಮಾನಸಿಕ ಅಸ್ವಸ್ಥರಾಗಿದ್ದು, ಅವರಿಬ್ಬರಿಗೆ ನಮ್ಮ ಪ್ರಶ್ನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ನಾವು ವೈದ್ಯರ ಸಹಾಯ ತೆಗೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರಗಿತು ಭಾರೀ ಸಂಪತ್ತು – ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದ ಅದಾನಿ

Live Tv

Leave a Reply

Your email address will not be published. Required fields are marked *

Back to top button