ಕೋಲಾರ: ಶಕ್ತಿ ದೇವತೆ ಕೋಲಾರಮ್ಮ ದೇವಿಯ ಹುಟ್ಟುಹಬ್ಬದ ಹಿನ್ನೆಲೆ ಕೋಲಾರದ ಕೋಟಿ ಬಡಾವಣೆಯಲಿರುವ ಕೋಲಾರಮ್ಮ ದೇವಾಲಯದಲ್ಲಿ (Kolaramma Temple) ಭಕ್ತ ಸಾಗರವೇ ಹರಿದು ಬಂದಿತ್ತು. ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು (Devotees) ದೇವಾಲಯಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದು ಪುನೀತರಾದರು.
ಹುಟ್ಟುಹಬ್ಬದ ಪ್ರಯುಕ್ತ ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ದೇವಾಲಯದ ಆವರಣವನ್ನ ತಳಿರು ತೋರಣಗಳಿಂದ ಅಲಂಕಾರ ಮಾಡುವ ಮೂಲಕ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಇದನ್ನೂ ಓದಿ: ಶಾಸಕ ಸುಬ್ಬಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ – ನಾಳೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಸಂಪೂರ್ಣ ಬಂದ್‌ಗೆ ಕರೆ
ಇನ್ನು ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ತೀರ್ಥ-ಪ್ರಸಾದ ವಿತರಣೆ ಮಾಡಿದ್ದು, ಎಲ್ಲರಿಗೂ ಅನ್ನ ಸಂತರ್ಪಣೆಯ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು. ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಕೋಲಾರ ಸೇರಿದಂತೆ ವಿವಿಧ ತಾಲೂಕುಗಳಿಂದ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು. ಇದನ್ನೂ ಓದಿ: ಇಂದೇ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್

