ಫ್ಯಾಬ್ರಿಕ್ ಗೋಡೌನ್‍ನಲ್ಲಿ ಬೆಂಕಿ – ಸ್ಥಳಕ್ಕೆ ಆಗಮಿಸಿದ 18 ಅಗ್ನಿ ಶಾಮಕ ವಾಹನ

Public TV
1 Min Read
New Delhi Godown

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಓಖ್ಲಾ 2ನೇ ಹಂತದ ಹರ್ಕೇಶ್ ನಗರದಲ್ಲಿರುವ ಫ್ಯಾಬ್ರಿಕ್ ಗೋಡೌನ್‍ನಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ದೆಹಲಿ ಅಗ್ನಿ ಶಾಮಕ ಸೇವಾ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಿನ ಜಾವ ಸುಮಾರು 4 ಗಂಟೆಗೆ ಗೋಡೌನ್‍ನಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಗೋಡೌನ್‍ನ ಫಸ್ಟ್ ಫ್ಲೋರ್ ಹಾಗೂ ಬೇಸ್‍ಮೆಂಟ್‍ನಲ್ಲಿರುವ ಕಾಟನ್, ದಾರ ಮತ್ತು ಬಟ್ಟೆಗಳು ಸುಟ್ಟು ಕರಕಲಾಗಿದೆ. ಘಟನೆ ಕುರಿತಂತೆ ಕರೆ ಬರುತ್ತಿದ್ದಂತೆ ಸ್ಥಳಕ್ಕೆ 18 ಅಗ್ನಿ ಶಾಮಕ ವಾಹನಗಳನ್ನು ಕಳುಹಿಸಲಾಯಿತು ಎಂದು ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಬಾಡಿಬಿಲ್ಡರ್ ಸ್ಪರ್ಧೆಯಲ್ಲಿ ಗಿನ್ನೆಸ್ ರೆಕಾರ್ಡ್ ಪಡೆದ ಕುಬ್ಜ ವ್ಯಕ್ತಿ

ಇದೀಗ ಅಗ್ನಿ ಶಾಮಕ ದಳ ಬೆಂಕಿ ನಾಂದಿಸುವ ಕಾರ್ಯ ನಡೆಸುತ್ತಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಲ್ಲದೇ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸದ್ಯ ಇದೀಗ ಈ ವಿಚಾರವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ನುಡಿದಿದ್ದಾರೆ.  ಇದನ್ನೂ ಓದಿ: ಉಚಿತವಾಗಿ 120 ದಿನಗಳಲ್ಲಿ 25 ಸಾವಿರ ಮಂದಿಗೆ ಕೋವಿಡ್ ಲಸಿಕೆ- ಶ್ರೀರಾಮ ಸೇವಾ ಮಂಡಳಿ

Share This Article