ಬೆಂಗಳೂರು: ಪಕ್ಷದ ಏಳಿಗೆಗಾಗಿ, ಪಕ್ಷವನ್ನು ಬೆಳೆಸಲು ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆ. ಆ ವಿಶ್ವಾಸದೊಂದಿಗೆ ಇಲ್ಲಿಂದ ಹೋಗುತ್ತಿದ್ದೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ವಿಧಾನಸಭೆಯಲ್ಲಿ ವಿದಾಯ ಭಾಷಣ (Farewell Speech) ಮಾಡಿದ್ದಾರೆ.
Advertisement
ವಿಧಾನ ಸಭೆಯಲ್ಲಿ ಮಾತನಾಡಿದ ಅವರು, ಈ ಸದನದವನ್ನು ಅಧ್ಯಕ್ಷರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಯಶಸ್ವಿಯಾಗಿ ನಡೆಸಿದ್ದಾರೆ. ನೀವು ಮುಂದಿನ ಬಾರಿ ಮಂತ್ರಿಯಾಗಿ ಇಲ್ಲಿ ಕೂರಬೇಕು. ಇಲ್ಲಿ ಮಹಿಳೆಯರು ಹೆಚ್ಚು ಆಯ್ಕೆ ಆಗಬೇಕು ಎಂದು ನುಡಿದರು.
Advertisement
Advertisement
ಶಿಕಾರಿಪುರದ ಜನರಿಗೆ ಧನ್ಯವಾದ ತಿಳಿಸಿದ ಯಡಿಯೂರಪ್ಪ, ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಫೆಬ್ರವರಿ 27ಕ್ಕೆ ನನಗೆ 80 ವರ್ಷ ತುಂಬುತ್ತದೆ. ಪ್ರಧಾನಿ ನರೇಂದ್ರ ಮೋದಿ ನನ್ನ ಹುಟ್ಟು ಹಬ್ಬಕ್ಕೆ ಬರಲಿದ್ದಾರೆ. ಅಂದೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ ಎಂದರು.
Advertisement
ಮಾಜಿ ಪ್ರಧಾನಿ ದೇವೇಗೌಡರನ್ನು ಹೊಗಳಿದ ಬಿಎಸ್‌ವೈ, ಅವರು ನಮಗೆ ಆದರ್ಶ. ಅವರನ್ನು ನೋಡಿ ಕಲಿಯುವಂತದ್ದು ತುಂಬಾ ಇದೆ. ಈ ವಯಸ್ಸಿನಲ್ಲೂ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡುತ್ತಾರೆ, ಚಿಂತನೆ ಮಾಡುತ್ತಾರೆ. ಅವರು ನಮಗೆ ಆದರ್ಶ ಎಂದರು. ಇದೇ ವೇಳೆ ವಾಜಪೇಯಿಯವರನ್ನು ಯಡಿಯೂರಪ್ಪ ಅವರು ನೆನೆಸಿಕೊಂಡಾಗ ಪಕ್ಷಭೇದ ಮರೆತು ಶಾಸಕರು ಚಪ್ಪಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಟಿ ರವಿಗೆ ಮೂಳೆ ಬಿರಿಯಾನಿ, ಚಿಕನ್ ಪಾರ್ಸೆಲ್ ಮಾಡಿದ ಕೈ ಪಡೆ
ಸಿಎಂ ಬಸವರಾಜ ಬೊಮ್ಮಾಯಿ ಜನರು ಮರೆಯಲಾಗದ ರೀತಿಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಕೊಡುಗೆ ಕೊಟ್ಟಿದ್ದಾರೆ. ಮುಂಬರುವ ದಿನಗಳಲ್ಲಿ ಅದರ ಫಲ ಅವರಿಗೆ ಸಿಗಲಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಯಶಸ್ವಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಎಟಿ ರಾಮಸ್ವಾಮಿ ಸೇರಿದಂತೆ ಹಲವರು ಉತ್ತಮ ಕೆಲಸ ಮಾಡಿದ್ದಾರೆ ಎಂದರು.
ನಾನು ಇಷ್ಟು ಎತ್ತರಕ್ಕೆ ಬೆಳೆಯಲು ಕಾರಣ ಆರ್‌ಎಸ್‌ಎಸ್. ಅಲ್ಲಿ ಸಿಕ್ಕಿದ ತರಬೇತಿಯಿಂದ ನನಗೆ ಇಷ್ಟೆಲ್ಲಾ ಸ್ಥಾನಮಾನಗಳು ಸಿಕ್ಕಿದೆ. ನಾನು ಇನ್ನು ಚುನಾವಣೆಗೆ ನಿಲ್ಲಲ್ಲ ಎಂಬ ತೀರ್ಮಾನ ಮಾಡಿದ್ದೇನೆ. ಮತ್ತೆ ರಾಜ್ಯದಲ್ಲಿ ಓಡಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ. ನೀವೆಲ್ಲರೂ ಮತ್ತೆ ಆಯ್ಕೆಯಾಗಿ ಬರಬೇಕು. ಆಡಳಿತ ಪಕ್ಷದ ಯಾರೂ ವಿಚಲಿತರಾಗಬೇಕಿಲ್ಲ. ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ನನಗಿದೆ ಎಂದು ಹೇಳಿದರು. ಇದನ್ನೂ ಓದಿ: ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಹೆಚ್‌ಡಿಕೆ ಮಾಸ್ಟರ್ ಪ್ಲಾನ್
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k