ಕೋಲಾರ: ಮಂಕಿ ಕ್ಯಾಪ್ ಧರಿಸಿ ಬಂದಿದ್ದ ಮುಸುಕುಧಾರಿಯೋರ್ವ, ಒಂಟಿ ಮನೆಯಲ್ಲಿದ್ದ ವೃದ್ಧೆಯ ಚಿನ್ನದ ಸರ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದೇವಗಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ವೆಂಕಟಲಕ್ಷ್ಮಮ್ಮ ಅವರ ಒಂದೂವರೆ ಲಕ್ಷ ಮೌಲ್ಯದ ಚಿನ್ನದ ಸರ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಮಂಕಿ ಕ್ಯಾಪ್, ಹ್ಯಾಂಡ್ ಗ್ಲೌಸ್ ಹಾಗೂ ಜರ್ಕಿನ್ ಧರಿಸಿ ಬಂದಿದ್ದ ವ್ಯಕ್ತಿ ಮನೆಯಲ್ಲಿ ಮಲಗಿದ್ದ ವೇಳೆ ಬಾಗಿಲು ಬಡಿದು ವೃದ್ಧೆಯನ್ನು ಎಚ್ಚರಗೊಳಿಸಿ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಓದಿ: ಹತ್ಯೆ ಸ್ಥಳದಲ್ಲಿ ನನ್ನ ಮಗ ಇದ್ದಿದ್ದು ನಿಜವಾದ್ರೆ ರಾಜೀನಾಮೆ ನೀಡುತ್ತೇನೆ: ಅಜಯ್ ಮಿಶ್ರಾ
ಬಾಗಿಲು ತೆರಯುತ್ತಿದ್ದಂತೆ ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದಾನೆ. ಸುಮಾರು 1.5 ಲಕ್ಷ ಮೌಲ್ಯದ ಸುಮಾರು 40 ಗ್ರಾಮ ಚಿನ್ನದ ಸರ ಕಳ್ಳತನ ಮಾಡಿರುವ ಆರೋಪಿ ಮಹಿಳೆ ಚಿರಾಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ. ಕೆಜಿಎಫ್ ಸುತ್ತಮುತ್ತ ಇದು ಕಳೆದ 15 ದಿನಗಳಲ್ಲಿ ಮೂರನೆ ಪ್ರಕರಣವಾಗಿದ್ದು, ಬೆಚ್ಚಿಬೀಳಿಸಿದ ಘಟನೆಗೆ ಗ್ರಾಮದಲ್ಲಿ ಆತಂಕದ ವಾತಾವರಣ ಎದುರಾಗಿದೆ. ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ