ಮಂಡ್ಯ: ಗೋಲ್ಡ್ ವಂಚನೆ ಕೇಸ್‌ನಲ್ಲಿ ಜೈಲು ಸೇರಿರುವ ಐಶ್ವರ್ಯ ಗೌಡ (Aishwarya Gowda) ವಂಚನೆ ಹಿಸ್ಟರಿ ಬಗೆದಷ್ಟು ಬೆಳಕಿಗೆ ಬರುತ್ತಿದೆ. ಈಕೆಯಿಂದ ಕೋಟಿಗಟ್ಟಲೆ ವಂಚನೆಗೊಳಗಾದ ಮತ್ತೋರ್ವ ವ್ಯಕ್ತಿ ದೂರು ನೀಡಲು ಮುಂದಾಗಿದ್ದಾರೆ.
ಮಾಜಿ ಸಂಸದ ಡಿ.ಕೆ.ಸುರೇಶ್ (D.K.Suresh) ನನ್ನ ಸಹೋದರ ಎಂದುಕೊಂಡು ಕೋಟಿಗಟ್ಟಲೇ ವಂಚನೆ ಮಾಡಿ ಇದೀಗ ಈ ಐಶ್ವರ್ಯ ಗೌಡ ಜೈಲು ಸೇರಿದ್ದಾಳೆ. ವನಿತಾ ಐತಾಳ ನೀಡಿರುವ ದೂರಿನ ಮೇರೆಗೆ ವಂಚಕಿ ಐಶ್ವರ್ಯ ಗೌಡಳನ್ನು ಇದೀಗ ಪೊಲೀಸರು ಬಂಧನ ಮಾಡಿದ್ದಾರೆ. ವನಿತಾಗೆ ಮಾತ್ರವಲ್ಲ ಹಲವು ಜನರಿಗೆ ಐಶ್ವರ್ಯ ಗೌಡ ಉರುಫ್ ನವ್ಯಶ್ರೀ ಕೋಟಿಗಟ್ಟಲೇ ಮಹಾದೋಖಾ ಮಾಡಿರೋದು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಇದನ್ನೂ ಓದಿ: ಡಿ.ಕೆ ಸುರೇಶ್ ತಂಗಿ ಅಂತ ಹೇಳ್ಕೊಂಡು ವಂಚನೆ ಕೇಸ್ -ಆರೋಪಿ ಐಶ್ವರ್ಯ ಗೌಡ, ಪತಿ ಹರೀಶ್ ಅರೆಸ್ಟ್
Advertisement
Advertisement
ಬಿಲ್ಡರ್, ಚಿನ್ನದ ವ್ಯಾಪಾರಿ ಕಮ್ ಕಾಂಗ್ರೆಸ್ ಮುಖಂಡನಿಗೂ ಸಹ ಕೋಟ್ಯಂತರ ರೂಪಾಯಿ ಟೋಪಿ ಹಾಕಿರೋದು ಬೆಳಕಿಗೆ ಬಂದಿದೆ. ಸದ್ಯ ಆ ಉದ್ಯಮಿ ತನ್ನ ಹೆಸರು ಬಹಿರಂಗಪಡಿಸಬೇಡಿ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ವಾಸವಿರುವ ಆತ ಮೈಸೂರು, ಮಂಡ್ಯ, ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಾ ಆತ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾನೆ. ಐಶ್ವರ್ಯ ಗೌಡ ಈ ವ್ಯಕ್ತಿಯಿಂದ 6.5 ಕೋಟಿ ಹಣ ಹಾಗೂ ಒಂದಷ್ಟು ಗೋಲ್ಡ್‌ನ್ನು ಪಡೆದಿದ್ದಾಳೆ ಎನ್ನಲಾಗಿದೆ.
Advertisement
Advertisement
ಒಂದೂವರೆ ವರ್ಷದ ಹಿಂದೆ ಈ ಉದ್ಯಮಿ ಕಮ್ ಕಾಂಗ್ರೆಸ್ ಮುಖಂಡನಿಗೆ ಐಶ್ವರ್ಯ ಗೌಡ ಪರಿಚಯವಾಗಿದ್ದಾಳೆ. ಐಷಾರಾಮಿ ಕಾರು, ಬೌನ್ಸರ್, ಗನ್‌ಮ್ಯಾನ್ ಜೊತೆಗೆ ಬಂದು ಆ ಉದ್ಯಮಿಯನ್ನು ಪರಿಚಯ ಮಾಡಿಕೊಂಡಿದ್ದಾಳೆ. ನಂತರ ಇವರಿಬ್ಬರು ಸೇರಿ ರಿಯಲ್ ಎಸ್ಟೇಟ್ ವ್ಯವಹಾರವನ್ನು ಮಾಡಿದ್ದಾರೆ. ಆರಂಭದಲ್ಲಿ ಎಲ್ಲಾ ವ್ಯವಹಾರ ಸರಿಯಾಗಿ ಈ ವಂಚಕಿ ಐಶ್ವರ್ಯ ಗೌಡ ಮಾಡಿದ್ದಾಳೆ. ಇದಾದ ಬಳಿಕ ಆ ವ್ಯಕ್ತಿಯಿಂದ ಚಿನ್ನ ಹಾಗೂ ನಗದು ರೂಪದಲ್ಲಿ 6.5 ಕೋಟಿ ಹಣವನ್ನು ಪಡೆದಿದ್ದಾಳೆ. ಬಳಿಕ ಹಣವನ್ನು ಆತ ಕೇಳಿದ್ರೆ ಇಂದು, ನಾಳೆ ಎಂದು ಕಥೆ ಹೇಳ್ತಾ ಬಂದಿದ್ದಾಳೆ. ಆಗ ರಾಜ್ಯದ ಪ್ರಭಾವಿ ರಾಜಕಾರಣಿ ಮಧ್ಯಸ್ಥಿಕೆ ವಹಿಸಿ ಸಮಯ ನೀಡುವಂತೆ ಹೇಳಿದ್ದಾರೆ. ಇದೀಗ ಈಕೆಯ 9 ಕೋಟಿ ಗೋಲ್ಡ್ ದೋಖಾ ಕಹಾನಿ ಹೊರಬಂದ ಬಳಿಕ ಉದ್ಯಮಿ ಕಮ್ ಕಾಂಗ್ರೆಸ್ ಮುಖಂಡನಿಗೆ ವಂಚನೆಗೆ ಒಳಗಾಗಿರೋದು ಗೊತ್ತಾಗಿದೆ. ಹೀಗಾಗಿ ಆತ ಐಶ್ವರ್ಯ ಗೌಡ ಮೇಲೆ ಮಂಡ್ಯ ಅಥವಾ ಬೆಂಗಳೂರಿನಲ್ಲಿ ದೂರು ದಾಖಲು ಮಾಡಲು ದಾಖಲೆ ಸಮೇತ ಸಿದ್ಧರಾಗಿದ್ದಾರೆ. ಇದನ್ನೂ ಓದಿ: ಡಿ.ಕೆ.ಸುರೇಶ್ ತಂಗಿ ಹೆಸರಲ್ಲಿ ವಂಚನೆ – ಐಶ್ವರ್ಯಗೌಡ, ಪತಿಗೆ 14 ದಿನ ಜೈಲು