ದಾವಣಗೆರೆ: ಮನೆಯ ಬೀಗ ಒಡೆದು 52 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕಳ್ಳರು ದೋಚಿದ ಘಟನೆ ಜಗಳೂರು (Jagalur) ತಾಲೂಕಿನ ದೇವಿಕೆರೆ ಗ್ರಾಮದಲ್ಲಿ ನಡೆದಿದೆ.
410 ಗ್ರಾಂ ಚಿನ್ನಾಭರಣ (Gold), 600 ಗ್ರಾಂ ಬೆಳ್ಳಿ , 4 ಲಕ್ಷ ರೂ. ನಗದು ಸೇರಿ ಸುಮಾರು 52 ಲಕ್ಷ ಮೌಲ್ಯದ ವಸ್ತುಗಳನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಗ್ರಾಮದ ಕವಿತಾ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮಹಿಳೆ ಮಗನ ಚಿಕಿತ್ಸೆಗೆಂದು ಮನೆಗೆ ಬೀಗ ಹಾಕಿಕೊಂಡು ದಾವಣಗೆರೆಯ ಆಸ್ಪತ್ರೆಗೆ ತೆರಳಿದ್ದರು. ಈ ಸಮಯದಲ್ಲಿ ಕಳ್ಳರು ಹೊಂಚು ಹಾಕಿ ಕೃತ್ಯ ಎಸಗಿದ್ದಾರೆ. ಐದು ದಿನಗಳ ನಂತರ ಮನೆಗೆ ಮರಳಿದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ.
ಈ ಸಂಬಂಧ ಬಿಳಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ. ಸ್ಥಳಕ್ಕೆ ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಇದನ್ನೂ ಓದಿ: ಅತ್ಯಾಚಾರ, ಬೆದರಿಕೆ ಆರೋಪದಡಿ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಅರೆಸ್ಟ್

