- ಹೆಂಡ್ತಿ, ಪ್ರಿಯಕರ ಅರೆಸ್ಟ್
ಬೆಳಗಾವಿ: ಪ್ರಿಯಕರನ (Lover) ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ.
ಪ್ರಿಯಕರನ ಜೊತೆ ಸೇರಿದ ಹೈನಾತಿ ಹೆಂಡ್ತಿ ಗಂಡನ ಮನೆಯಲ್ಲಿಯೇ 21 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ಕಳ್ಳತನ (Gold jewelry Theft) ಮಾಡಿದ್ದಾಳೆ. ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತರು. ಬಂಧಿತರಿಂದ 11 ಸಾವಿರ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಮಂಗಳೂರು| ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು

ಮೊದಲು ಕಳ್ಳತನದ ಬಗ್ಗೆ ದಿಲ್ಶಾನ್ ನದಾಫ್ ಎಂಬುವವರು ಕಟಕೋಳ ಠಾಣೆಗೆ ದೂರು ನೀಡಿದ್ದರು. ದೂರು ಪಡೆದ ಪೊಲೀಸರು ಕೃತ್ಯ ನಡೆದ 48 ಗಂಟೆಯಲ್ಲಿ ಕಳ್ಳತನ ಮಾಡಿದ್ದ ಪ್ರೇಮಿಗಳನ್ನ ಬಂಧಿಸಿದ್ದಾರೆ. ರಾಮದುರ್ಗ ಸಿಪಿಐ ವಿನಾಯಕ ಬಡಿಗೇರ ಮತ್ತು ಪಿಎಸ್‌ಐ ಬಸವರಾಜ್ ಕೊಣ್ಣೂರೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದರು.
ಹಸೀನಾ ಮೂಲತಃ ಮೂಡಲಗಿ ತಾಲೂಕಿನವಳು. ಕಳೆದ ಎರಡು ತಿಂಗಳ ಹಿಂದೆ ಹೊಸಕೋಟಿ ಗ್ರಾಮದ ಶರೀಫ್ ಜೊತೆಗೆ ಮದುವೆಯಾಗಿತ್ತು. ಮದುವೆಯ ನಂತರವೂ ಸಹ ಪ್ರಿಯಕರನ ಸಂಪರ್ಕದಲ್ಲಿ ಹಸೀನಾ ಇದ್ದಳು. ಕೊನೆಗೆ ಪ್ರಿಯಕರನ ಜೊತೆ ಓಡಿಹೋಗುವ ಪ್ಲ್ಯಾನ್ ಮಾಡಿದ್ದ ಆಕೆ ಗಂಡನ ಮನೆಗೆ ಕನ್ನ ಹಾಕಿದ್ದಳು. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಹಟ್ಟಿದ್ದಾರೆ.
ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರ ಕಾರ್ಯಕ್ಕೆ ಎಸ್ಪಿ ಕೆ ರಾಮರಾಜನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭ – ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳ ಎತ್ತಂಗಡಿ

