ಮಂಡ್ಯ: ಚಿನ್ನಾಭರಣಗಳಿಗೆ ಪಾಲಿಶ್ ಮಾಡುವ ನೆಪದಲ್ಲಿ ನಕಲಿ ಚಿನ್ನ ನೀಡಿ ಪರಾರಿಯಾಗಲು ಯತ್ನಿಸಿದ್ದ ಇಬ್ಬರು ಕಳ್ಳರನ್ನು ಹಿಡಿದು ಗ್ರಾಮಸ್ಥರು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಂದು ಬಲ್ಲೇನಹಳ್ಳಿ ಗ್ರಾಮಕ್ಕೆ ಬಂದಿದ್ದ ಆರೋಪಿಗಳು, ರೂಪಾ ಎಂಬವರಿಗೆ ಒಂದು ಸರವನ್ನು ಪಾಲಿಶ್ ಮಾಡಿಸಿದರೆ ಮತ್ತೊಂದು ಸರಕ್ಕೆ ಉಚಿತವಾಗಿ ಪಾಲಿಶ್ ಮಾಡಿಕೊಡುತ್ತೇವೆ ಅಂತಾ ಹೇಳಿದ್ದರು. ಇದನ್ನು ನಂಬಿದ ರೂಪಾ ತಮ್ಮ ಚಿನ್ನದ ಸರವನ್ನು ಪಾಲಿಶ್ ಮಾಡಲು ಕೊಟ್ಟಿದ್ದರು. ರೂಪಾ ಅವರ ಗಮನವನ್ನು ಬೇರೆಡೆಗೆ ಹರಿಸಿ ನಕಲಿ ಚಿನ್ನ ನೀಡಿ ಪರಾರಿಯಾಗಲು ಯತ್ನಿಸಿದ್ದರು.
ಆಭರಣವನ್ನು ತೆಗೆದುಕೊಂಡು ಪರಾರಿಯಾಗಲು ಯತ್ನಿಸಿದ್ದ ಯುವಕರನ್ನು ನೋಡಿ ರೂಪ ಜೋರಾಗಿ ಕಿರಿಚಾಡಿದ್ದರು. ಸ್ಥಳದಲ್ಲಿಯೇ ಇದ್ದ ಕೆಲವು ಗ್ರಾಮಸ್ಥರು ಆರೋಪಿಗಳನ್ನು ಹಿಡಿದು ಥಳಿಸಿ, ಬಳಿಕ ಪೊಲೀಸರ ವಶಕ್ಕೆ ನೀಡಿದ್ದಾರೆ. ಈ ಕುರಿತು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv