ಬೆಂಗಳೂರು: ಚಿನ್ನದ ಬೆಲೆ ಗಗನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ಪೊಲೀಸರ ಮನೆಯನ್ನೂ ಬಿಡದೇ ಖತರ್ನಾಕ್ ಕಳ್ಳರು ಕೈಚಳಕ ತೋರಿಸಿದ್ದಾರೆ.
ಬೆಂಗಳೂರು (Bengaluru) ನಗರದ ಜಾಲಹಳ್ಳಿ (Jalahalli) ಹೆಚ್‌ಎಟಿ ಪೊಲೀಸ್ ಕ್ವಾಟ್ರಸ್‌ನಲ್ಲಿ ವಾಸವಿದ್ದ ಶ್ರೀಧರ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಶ್ರೀಧರ್ ಎಂಬುವವರು ಕಾನ್‌ಸ್ಟೇಬಲ್ ಆಗಿದ್ದು, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ – 3 ಬಾರಿ ಸಿಎಂ ಆಗಿದ್ದ ಪನ್ನೀರ್‌ಸೆಲ್ವಂ ಡಿಎಂಕೆ ಸೇರ್ಪಡೆ
ಶ್ರೀಧರ್ ಅವರ ಪತ್ನಿಯ ಕುಟುಂಬಸ್ಥರು ಮುರುಗೇಶ್ ಪಾಳ್ಯದಲ್ಲಿ ವಾಸವಾಗಿದ್ದರು. ಈ ಹಿನ್ನೆಲೆ ಶ್ರೀಧರ್ ಹಾಗೂ ಅವರ ಪತ್ನಿ ಅಲ್ಲಿಗೆ ತೆರಳಿದ್ದರು. ಈ ವೇಳೆ ಜಾಲಹಳ್ಳಿಯಲ್ಲಿರುವ ಕ್ವಾಟರ್ಸ್ನಲ್ಲಿ ಕಳ್ಳತನ ನಡೆದಿದೆ.
ಮನೆಯಲ್ಲಿದ್ದ ನೆಕ್ಲೆಸ್, ಕಿವಿ ಓಲೆ, ಬೆಳ್ಳಿ ಹಾಗೂ ರೇಷ್ಮೆ ಸೀರೆ ಕಳ್ಳತನವಾಗಿದ್ದು, ಘಟನೆ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಜಾಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

