ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಚೆನ್ನೈ ಮೂಲದ ಮಹಿಳೆಯೊಬ್ಬರು ಬ್ಯಾಂಕಾಂಕ್‍ನಿಂದ ಬೆಂಗಳೂರಿಗೆ ಬಂದಿಳಿದ್ದಳು. ಈ ವೇಳೆ ಕಸ್ಟಮ್ಸ್ ಹಾಗೂ ಏರ್ ಇಂಟಲಿಜೆನ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಮಹಿಳೆ 12.48 ಮೌಲ್ಯದ ಚಿನ್ನ ಸಾಗಾಟ ಮಾಡುವ ಪ್ರಕರಣ ಬೆಳಕಿಗೆ ಬಂದಿದೆ. ಈಕೆ ತನ್ನ ಗುದದ್ವಾರದ ಮೂಲಕ ಚಿನ್ನ ಸಾಗಾಟ ಮಾಡುತ್ತಿದ್ದಳು ಎನ್ನಲಾಗಿದೆ. ಸದ್ಯ ಅಧಿಕಾರಿಗಳು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಕಾರ್ ಸ್ವಚ್ಛಗೊಳಿಸುವ ಉಪಕರಣದಲ್ಲಿ ಚಿನ್ನ ತಂದಿದ್ದವನನ್ನು ಕೂಡ ಅಧಿಕಾರಿಗಳು ಬಂಧಿಸಿದ್ದಾರೆ. ಎಮಿರೇಟ್ಸ್ ಪ್ಲೈಟ್‍ನಲ್ಲಿ ದುಬೈ ನಿಂದ ಬೆಂಗಳೂರಿಗೆ ಬಂದಿದ್ದ ಅಸಾಮಿ ಕಬ್ಬಿಣದ ಉಪಕರಣದಲ್ಲಿ 14 ಲಕ್ಷದ ಚಿನ್ನದ ಬಿಸ್ಕೆಟ್ಸ್ ಇಟ್ಟು ತಂದಿದ್ದ. ಒಟ್ಟು ನಾಲ್ಕು ಪ್ರಕರಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಸುಮಾರು 37.21 ಲಕ್ಷ ಮೌಲ್ಯದ ಚಿನ್ನವನ್ನ ಜಪ್ತಿ ಮಾಡಿದ್ದಾರೆ.