ಮೈಸೂರು: ಮನೆಯ ಹಿಂಬಾಗಿಲಿನ ಬೀಗ ಮುರಿದು ಸುಮಾರು 22 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ಕಳ್ಳತನ ಮಾಡಿರುವ ಘಟನೆ ಮೈಸೂರು (Mysuru) ತಾಲೂಕಿನ ನಾಗವಾಲದಲ್ಲಿ ನಡೆದಿದೆ.
ನಾಗವಾಲದ (Nagwala) ನಿವಾಸಿ ರೇಣುಕಾ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯವರು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದ ವೇಳೆ ಹಿಂಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಇದನ್ನೂ ಓದಿ: ಸುಶ್ಮಿತಾ ಸೇನ್ ಮಾಜಿ ಅತ್ತಿಗೆಗೆ ಆರ್ಥಿಕ ಸಂಕಷ್ಟ- ಆನ್‌ಲೈನ್‌ನಲ್ಲಿ ನಟಿ ಸೀರೆ ಮಾರಾಟ
3,26,700 ರೂ., ನಗದು 276 ಗ್ರಾಂ ಚಿನ್ನ, 1,350 ಗ್ರಾಂ ಬೆಳ್ಳಿ ಸೇರಿ ಸುಮಾರು 22 ಲಕ್ಷ ಮೌಲ್ಯದ ವಸ್ತುಗಳನ್ನ ಖದೀಮರು ದೋಚಿದ್ದಾರೆ. ಸದ್ಯ ಇಲವಾಲ ಪೊಲೀಸರು (Ilavala Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜಾತಿಗಣತಿ ವರದಿ ಸೀಲ್ ಓಪನ್… ಕ್ಯಾಬಿನೆಟ್‌ನಲ್ಲಿ ಮಂಡನೆ; ಮುಂದಿನ ಕ್ಯಾಬಿನೆಟ್‌ಗೆ ಕ್ಲೈಮ್ಯಾಕ್ಸ್..!