ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನವಾಗಿರುವ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ (Ranya Rao) ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.
ದುಬೈನಿಂದ ಕೋಟಿ ಕೋಟಿ ಬೆಲೆಬಾಳುವ ಚಿನ್ನ ತಂದು ಡಿಆರ್‌ಐ ಅಧಿಕಾರಿಗಳಿಗೆ ಲಾಕ್ ಆಗಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ, ಆರ್ಥಿಕ ಅಪರಾಧದ ವಿಶೇಷ ನ್ಯಾಯಾಲದಲ್ಲಿ ವಾದ-ಪ್ರತಿವಾದ ನಡೆಸಲಾಗಿದ್ದು, ಜಾಮೀನು ಆದೇಶ ಇಂದಿಗೆ ಕಾಯ್ದಿರಿಸಲಾಗಿದೆ. ಇದನ್ನೂ ಓದಿ: 6 ಅಡಿ ಎತ್ತರದ ವ್ಯಕ್ತಿಯೊಬ್ಬ ಚಿನ್ನವಿದ್ದ ಎರಡು ಬಾಕ್ಸ್ ನೀಡಿದ್ದ: ರನ್ಯಾ ತಪ್ಪೊಪ್ಪಿಗೆ
ಇಂದು ಮಧ್ಯಾಹ್ನದ ನಂತರ ನಟಿಯ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಆರೋಪಿ ನಟಿ ರನ್ಯಾ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಾಡಿದ್ದು, ಡಿಆರ್‌ಐ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲನೆ ಮಾಡಿಲ್ಲ. ಹೆಣ್ಣು ಎಂದೂ ನೋಡದೆ ರಾತ್ರಿಯಿಡೀ ತನಿಖೆ ಮಾಡಿ ಮಾನಸಿವಾಗಿ ಹಿಂಸೆ ನೀಡುವ ಕೆಲಸವಾಗಿದೆ. ಅರೆಸ್ಟ್ ಮೇಮೊ ಕೂಡ ಕೊಟ್ಟಿಲ್ಲ. ಈ ಪ್ರಕರಣದಲ್ಲಿ ನನ್ನ ಕಕ್ಷಿದಾರೆಯ ಪಾತ್ರ ಇಲ್ಲ. ತನಿಖೆಗೆ ಸಹಕಾರ ನೀಡುತ್ತಿದ್ದು, ಜಾಮೀನು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಆದರೆ, ಡಿಆರ್‌ಐ ಪರ ವಕೀಲ ಮಧುರಾವ್ ಪ್ರಾಥಮಿಕ ತನಿಖೆಯ ವೇಳೆ ಆರೋಪಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಮಾಡಿರುವುದು ಕಂಡುಬಂದಿದೆ. ಚಿನ್ನವನ್ನ ಕೂಡ ವಶಕ್ಕೆ ಪಡೆದುಕೊಂಡು ತನಿಖೆ ಮಾಡಲಾಗುತ್ತಿದೆ. ಮನೆ ಶೋಧ ಕಾರ್ಯದ ವೇಳೆ ಕೋಟಿ ಕೋಟಿ ಹಣ ಹಾಗೂ ಚಿನ್ನಭರಣಗಳು ಪತ್ತೆ ಆಗಿವೆ. ಒಂದು ದೊಡ್ಡ ಸಿಂಡಿಕೇಟ್ ಕೆಲಸ ಮಾಡುತ್ತಿರುವ ಬಗ್ಗೆ ತನಿಖೆಯ ವೇಳೆ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ರನ್ಯಾಗೆ ಮಾತ್ರ ಸಿನಿಮಾ ನಂಟಿಲ್ಲ – ಆರೋಪಿ ತರುಣ್‌ಗೆ ಇದೆ ಟಾಲಿವುಡ್ ನಂಟು!
ಹವಾಲ ಹಣದಲ್ಲಿ ವ್ಯವಹಾರ ಆಗಿರುವ ಬಗ್ಗೆ ಅನುಮಾನಗಳು ಕೂಡ ಇವೆ. ಪೊಲೀಸ್ ಪ್ರೋಟೊಕಾಲ್ ದುರುಪಯೋಗ ಆಗಿದ್ದು, ಆ ಬಗ್ಗೆಯೂ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ಆರೋಪಿ ನಟಿ ರನ್ಯಾ ರಾವ್‌ಗೆ ಜಾಮೀನು ನೀಡಿದರೆ, ತನಿಖೆಗೆ ಹಿನ್ನಡೆ ಆಗುತ್ತದೆ ಎಂದು ಡಿಆರ್‌ಐ ಪರ ವಕೀಲ ಪ್ರತಿವಾದ ಮಾಡಿದ್ದಾರೆ. ವಾದ-ಪ್ರತಿವಾದ ಅಲಿಸಿರುವ ನ್ಯಾಯಾದೀಶರು ಇಂದಿಗೆ ಆದೇಶ ಕಾಯ್ದಿರಿಸಿದ್ದರು.