– ಬೆಂಗಳೂರಿಗೆ ತಂದ ಚಿನ್ನವನ್ನು ನಟಿ ಯಾರಿಗೆ ಕೊಡ್ತಿದ್ರು?
ಬೆಂಗಳೂರು: ಚಿನ್ನ ಕಳ್ಳಸಾಗಣೆಯಲ್ಲಿ ನಟಿ ರನ್ಯಾ ರಾವ್ (Ranya Rao) ಬಂಧನ ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ.
ನಟಿ ರನ್ಯಾರನ್ನು ಬಂಧಿಸಿರುವ ಡಿಆರ್‌ಐ ಅಧಿಕಾರಿಗಳ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗಿವೆ. ರನ್ಯಾ ಕೇವಲ ಪಾತ್ರಧಾರಿ, ಅಸಲಿ ಕಿಂಗ್ ಬೇರೆಯೇ ಇದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: Gold Smuggling Case| ರನ್ಯಾ ರಾವ್ ಮನೆಯಲ್ಲಿ ಸಿಕ್ಕಿದ್ದೇನು? – ಅತೀ ದೊಡ್ಡ ಕಾರ್ಯಾಚರಣೆ ಎಂದ DRI
17 ಕೋಟಿ ಬೆಲೆಯ ಚಿನ್ನ ಖರೀದಿ ಮಾಡುವಷ್ಟು ರನ್ಯಾ ಶ್ರೀಮಂತಳಲ್ಲ. ರನ್ಯಾ ಹಿರಿಯ ಪೊಲೀಸ್ ಅಧಿಕಾರಿಯ ಮಲಮಗಳು. ಆಕೆಯನ್ನು ಬಳಸಿಕೊಂಡರೆ ಸುಲಭವಾಗಿ ಚಿನ್ನ ಸಾಗಾಟ ಮಾಡಬಹುದಾಗಿದೆ. ಇದೇ ಲೆಕ್ಕಾಚಾರದಲ್ಲಿ ರನ್ಯಾಳನ್ನು ಚಿನ್ನ ಸಾಗಾಟದಲ್ಲಿ ಬಳಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಈ ಅಕ್ರಮ ಚಿನ್ನ ಸಾಗಾಟದಲ್ಲಿ ಏರ್ಪೋರ್ಟ್‌ನ ಕೆಲ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಚಿನ್ನ ಸಾಗಾಟದಲ್ಲಿ ನಟಿ ರನ್ಯಾಗೆ ಕೆಜಿಗೆ ನಾಲ್ಕರಿಂದ ಐದು ಲಕ್ಷ ಕಮಿಷನ್ ನೀಡುತ್ತಿದ್ದ ಬಗ್ಗೆ ಮಾಹಿತಿ ಇದೆ. ಹಾಗಾದರೆ, ರನ್ಯಾ ಬೆಂಗಳೂರಿಗೆ ತಂದ ಚಿನ್ನವನ್ನು ಯಾರಿಗೆ ಕೊಡುತ್ತಿದ್ದರು ಎನ್ನುವ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: 40 ಬಾರಿ ದುಬೈಗೆ ಹೋಗಿದ್ದ ರನ್ಯಾ ಅಧಿಕಾರಿಗಳ ಬಲೆಗೆ ಬಿದ್ದಿದ್ದೆ ರೋಚಕ
ಕಳೆದ ಎರಡು ವರ್ಷದ ರನ್ಯಾ ಬ್ಯಾಂಕ್ ವಿವರ, ಆಕೆಯ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಡಿಆರ್‌ಐ ಅಧಿಕಾರಿಗಳು ಅಸಲಿ ಕಿಂಗ್‌ಪಿನ್‌ಗಳ ಬೆನ್ನು ಬಿದ್ದಿದ್ದಾರೆ.