ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ (Gold Smuggling Case) ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ (Ranya Rao) ಒಂದು ವರ್ಷ ಜೈಲಿನಲ್ಲೇ ಇರಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ.
ಹೌದು, ರನ್ಯಾರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯನ್ನು (COFEPOSA Act) ಜಾರಿ ಮಾಡಲಾಗಿದೆ. ಹೀಗಾಗಿ ರನ್ಯಾರಾವ್ 1 ವರ್ಷ ಕಾಲ ಜೈಲಿನಲ್ಲೇ ಇರಬೇಕಾದ ಅನಿವಾರ್ಯ ಎದುರಾಗಿದೆ. ಒಂದು ವೇಳೆ ಜಾಮೀನು ನೀಡಿದ್ರೆ ವಿದೇಶಕ್ಕೆ ಹಾರುವ ಸಾಧ್ಯತೆಗಳಿದೆ, ಜೊತೆಗೆ ಸಾಕ್ಷ್ಯಗಳ ಮೇಲೂ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ರನ್ಯಾ ವಿರುದ್ಧ ಕಾಫಿಪೋಸಾ ಜಾರಿ ಮಾಡಿ ಕಾಫಿಪೋಸಾ ಅಡ್ವೈಸರಿ ಬೋರ್ಡ್ ಆದೇಶ ಹೊರಡಿಸಿದೆ. ಇದನ್ನೂ ಓದಿ: ಗದಗ | ವಿಚಿತ್ರ ಲವ್‌ಜಿಹಾದ್ ಪ್ರಕರಣ – ಬಲವಂತವಾಗಿ ಹಿಂದೂ ಯುವಕನ ಮತಾಂತರ ಮಾಡಿಸಿರೋ ಆರೋಪ
ಕಾಫಿಪೋಸಾ ಅನ್ವಯ ರನ್ಯಾ ರಾವ್ ಹಾಗೂ ಇತರ ಆರೋಪಿಗಳು ಒಂದು ವರ್ಷ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ. ಈ ಕುರಿತು ಕಾಫಿ ಪೋಸಾ ಅಡ್ವೈಸರಿ ಬೋರ್ಡ್ DRIಗೆ ಮಾಹಿತಿ ನೀಡಿದ್ದು, DRI ನಿಂದ ಜೈಲು ಅಧೀಕ್ಷಕರಿಗೆ ಮಾಹಿತಿ ರವಾನೆ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಹೂಡಿಕೆ: ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಜೊತೆ ರೋಲ್ಸ್ ರಾಯ್ಸ್ ಕಂಪನಿ ಮಾತುಕತೆ
ಏನಿದು ಕಾಫಿಪೋಸಾ ಕಾಯ್ದೆ?
ಕಾಫಿಪೋಸಾ ಎಂದರೆ ವಿದೇಶಿ ವಿನಿಮಯ ನಿಯಂತ್ರಣ ಹಾಗೂ ಕಳ್ಳ ಸಾಗಾಣಿಕೆ ತಡೆ ಕಾಯ್ದೆಯಾಗಿದೆ. ಈ ಕಾಫಿಪೋಸಾ ಕಾಯ್ದೆಯನ್ನು ಕಳ್ಳಸಾಗಣೆ ಮಾಡುವವರ ವಿರುದ್ಧ ಹಾಕಲಾಗುತ್ತದೆ. ಆರೋಪಿಯು ಜಾಮೀನು ಪಡೆಯಬಾರದು ಎಂಬುದು ಇದರ ಮೂಲ ಉದ್ದೇಶವಾಗಿದೆ. ಆರೋಪಿಯು ಜಾಮೀನು ಪಡೆದು ಹೊರಗೆ ಬಂದರೆ ನಿರಂತರವಾಗಿ ಮತ್ತೆ ಕಳ್ಳ ಸಾಗಾಣಿಕೆ ಮಾಡುತ್ತಾರೆ. ಅಲ್ಲದೇ ಜೈಲಿನಿಂದ ಬಂದ ಬಳಿಕ ತಪ್ಪಿಸಿಕೊಳ್ಳಬಹುದು. ತನಿಖೆಗೆ ಸರಿಯಾಗಿ ಸಹಕಾರ ಕೊಡದೇ, ನಿರಂತರವಾಗಿ ಸ್ಮಗ್ಲಿಂಗ್‌ನಲ್ಲಿ ಮುಂದುವರೆಯುತ್ತಾರೆ ಎಂದು ಕಾಯ್ದೆ ಜಾರಿಗೊಳಿಸಲಾಗುತ್ತದೆ. ಇದನ್ನೂ ಓದಿ: ಕೇರಳ ನರ್ಸ್ ತಪ್ಪಿಗೆ ಕ್ಷಮೆಯಿಲ್ಲ, ಗಲ್ಲಿಗೇರಿಸಲೇಬೇಕು: ಕೊಲೆಯಾದ ಯೆಮನ್ ವ್ಯಕ್ತಿ ಸಹೋದರ ಪ್ರತಿಕ್ರಿಯೆ