ಬೆಂಗಳೂರು: ನಾನು ವಿಮಾನದಲ್ಲಿ ಚಿನ್ನವನ್ನು (Gold) ತಂದೇ ಇಲ್ಲ ಎಂದು ನಟಿ ರನ್ಯಾ ರಾವ್ (Ranya Rao) ದೂರು ನೀಡಿದ್ದಾಳೆ.
ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ (Judicial Custody) ರನ್ಯಾ ರಾವ್ ಈಗ ದೂರು ನೀಡುವ ಮೂಲಕ ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಾಳೆ.
ಪರಪ್ಪನ ಅಗ್ರಹಾರ (Parappana Agrahara) ಜೈಲರ್‌ಗೆ ದೂರು ನೀಡಿರುವ ರನ್ಯಾ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಯಾರನ್ನೋ ಬಚಾವ್ ಮಾಡಲು ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾಳೆ. ಇದನ್ನೂ ಓದಿ: ದುಬೈ ಟು ಬೆಂಗಳೂರು – ಆ 9 ಗಂಟೆಯಿಂದ ರನ್ಯಾ ರಾವ್ ಅರೆಸ್ಟ್!
ನಾನು ವಿಮಾನದಲ್ಲಿ ಚಿನ್ನವನ್ನು ತಂದೇ ಇಲ್ಲ. ಈ ಪ್ರಕರಣದಲ್ಲಿ ನಾನು ನಿರಪರಾಧಿಯಾಗಿದ್ದೇನೆ. ದುಬೈನಲ್ಲಿ ನನಗೆ ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡುತ್ತಿದ್ದೆ. ಈ ಕಾರಣಕ್ಕೆ ನಾನು ದುಬೈಗೆ ತೆರಳಿದ್ದೆ. ಮಾರ್ಚ್ 3 ರಂದು ಬೆಳಗ್ಗೆ ಹೋಗಿ ಕೆಲಸ ಮುಗಿಸಿದ ಬಳಿಕ ತಕ್ಷಣ ಮರಳಿದ್ದೇನೆ ಎಂದು ಹೇಳಿದ್ದಾಳೆ.
ಜೈಲರ್‌ಗೆ ಸಲ್ಲಿಸಿದ ದೂರನ್ನು ಪೊಲೀಸ್ ಅಧಿಕಾರಿಗಳು ಡಿಆರ್‌ಐಗೆ ವರ್ಗಾವಣೆ ಮಾಡಿದ್ದಾರೆ. ಈಗ ಡಿಆರ್‌ಐ ಅಧಿಕಾರಿಗಳು ದೂರನ್ನು ಪರಿಶೀಲನೆ ಮಾಡುತ್ತಿದ್ದಾರೆ.
ರನ್ಯಾ ಬಂಧನವಾಗುವ 2 ವಾರಗಳ ಹಿಂದೆ ರನ್ಯಾ ದುಬೈಗೆ ಹೋಗಿ ಬಂದಿದ್ದಳು. ಆಗ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಕಸ್ಟಮ್ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡು, ನಾನು ಡಿಜಿಪಿ ಮಗಳು ಎಂದು ತಪಾಸಣೆಗೆ ಒಳಗಾಗದೇ ಹೊರಗೆ ಬರುತ್ತಿದ್ದದ್ದಳು. ಪ್ರತಿ ಬಾರಿ ಆಕೆಯನ್ನು ಕರೆದೊಯ್ಯಲು ವಿಮಾನ ನಿಲ್ದಾಣ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಬಸವರಾಜು ಹೋಗುತ್ತಿದ್ದರು. ಈ ಜಗಳದ ಬಳಿಕ ರನ್ಯಾಳ ಮೇಲೆ ಕಣ್ಣಿಟ್ಟಿದ್ದ ಡಿಆರ್‌ಐ ಅಧಿಕಾರಿಗಳು ಆಕೆಯ ವಿದೇಶ ಪ್ರಯಾಣದ ಮೇಲೆ ಕಣ್ಣಿಟ್ಟಿದ್ದರು.
ರನ್ಯಾ ಮತ್ತೆ ದುಬೈಗೆ ಪ್ರಯಾಣ ಬೆಳೆಸಿದ ಬೆನ್ನಲ್ಲೇ ಜಾಗೃತರಾದ ಅಧಿಕಾರಿಗಳು ರನ್ಯಾ ಬರುವಿಕೆಗಾಗಿಯೇ ಕಾಯುತ್ತಿದ್ದರು. ಮಾ. 3 ರಂದು ರನ್ಯಾ ಪತಿ ಜೊತೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಣಕ್ಕೆ ಬಂದಿಳಿಯುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಆಗಲೂ ಸಹ ರನ್ಯಾಳನ್ನು ತಪಾಸಣೆ ಇಲ್ಲದೇ ಹೊರಗೆ ಕರೆತರಲು ವಿಮಾನ ನಿಲ್ದಾಣ ಠಾಣೆ ಹೆಡ್ ಕಾನ್‌ಸ್ಟೇಬಲ್ ಬಸವರಾಜ್ ತೆರಳಿದ್ದರು. ರನ್ಯಾಳನ್ನ ಅಧಿಕಾರಿಗಳು ವಶಕ್ಕೆ ಪಡೆದಾಗ ಅವರು ಡಿಜಿಪಿ ರಾಮಚಂದ್ರರಾವ್ ಅವರ ಮಗಳು ಎಂದಿದ್ದಾರೆ. ಇದನ್ನೂ ಓದಿ: 6 ಅಡಿ ಎತ್ತರದ ವ್ಯಕ್ತಿಯೊಬ್ಬ ಚಿನ್ನವಿದ್ದ ಎರಡು ಬಾಕ್ಸ್ ನೀಡಿದ್ದ: ರನ್ಯಾ ತಪ್ಪೊಪ್ಪಿಗೆ
ಕೂಡಲೇ ರನ್ಯಾಳನ್ನು ಲೋಹ ಪರಿಶೋಧಕ ಕಚೇರಿಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ 1 ಕೆಜಿ ತೂಕದ 14 ಗೋಲ್ಡ್ ಬಿಸ್ಕೆಟ್ ತಂದಿರುವುದು ತಿಳಿದಿದೆ. ತೊಡೆಯ ಭಾಗಕ್ಕೆ 14 ಬಿಸ್ಕೆಟ್‌ಗಳನ್ನು ಗಮ್ ಹಾಕಿ ಅಂಟಿಸಿಕೊಂಡು ಬಳಿಕ ಟೇಪ್‌ನಿಂದ ಸುತ್ತಿಕೊಂಡಿದ್ದಳು. ಯಾವುದೇ ಸ್ಕ್ಯಾನರ್‌ನಲ್ಲಿ ಅನುಮಾನ ಬಾರದಂತೆ ಕ್ರ್ಯಾಂಪ್ ಬ್ಯಾಂಡೇಜ್ ಹಾಕಿಕೊಂಡು ಬಂದಿದ್ದಳು. ಕೂಡಲೇ ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಿಸಿದಾಗದೇ ಆಕೆ ಪೊಲೀಸ್ ಅಧಿಕಾರಿಯ ಮಗಳು ಎನ್ನುವುದು ಬಯಲಾಗಿದೆ.