ಬೆಂಗಳೂರು: ಚಿನ್ನಕಳ್ಳಸಾಗಣೆ ಪ್ರಕರಣದಲ್ಲಿ (Gold Smuggling Case) ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ (Ranya Rao) ಜಾಮೀನು ಅರ್ಜಿ ಆದೇಶ ಇಂದು ಹೊರಬೀಳಲಿದೆ.
14 ಕೆ.ಜಿ ಅಂದ್ರೆ 12 ಕೋಟಿ ಮೌಲ್ಯದ ಚಿನ್ನದ ಗಟ್ಟಿಗಳನ್ನು ದುಬೈನಿಂದ ಬೆಂಗಳೂರಿಗೆ (Bengaluru) ತಂದು ಬಂಧನಕ್ಕೆ ಒಳಗಾಗಿದ್ದ ರನ್ಯಾ ರಾವ್‌ಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಶಾಕ್ ನೀಡಿತ್ತು. ಇದನ್ನೂ ಓದಿ: ಐಎಎಸ್ ಅಧಿಕಾರಿ ಅಂತ ಹೇಳ್ಕೊಂಡು ದೇಶ್ಯಾದ್ಯಂತ 20ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ
ಮತ್ತೆ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಅಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ವೇಳೆ ಚಿನ್ನ ಕಳ್ಳ ಸಾಗಾಣೆ ಮಾಡೋದಕ್ಕೆ ಹವಾಲ ವಹಿವಾಟು ನಡೆಸಲಾಗುತ್ತಿತ್ತು ಎಂಬ ಗಂಭೀರ ಆರೋಪವನ್ನು ಡಿಆರ್‌ಐ ಮಾಡಿತ್ತು. ಸುದೀರ್ಘ ವಾದ – ಪ್ರತಿವಾದ ಆಲಿಸಿದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇಂದು ಆದೇಶ ಹೊರಬೀಳಲಿದೆ. ಇದನ್ನೂ ಓದಿ: ಚಾಮರಾಜನಗರ| ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ – 18 ಅಡಿ ಉದ್ದದ ಸರಳಲ್ಲಿ ಬಾಯಿ ಬೀಗ