ತಿರುವನಂತಪುರಂ: ಕಳ್ಳಸಾಗಾಣಿಕೆದಾರರು ವಿವಿಧ ರೀತಿಯಲ್ಲಿ ಚಿನ್ನ, ವಜ್ರ, ಡ್ರಗ್ ಸೇರಿದಂತೆ ಮುಂತಾದವುಗಳನ್ನು ಕಳವು ಮಾಡುತ್ತಾರೆ. ಆದರೆ ಕೇರಳದ ಮೂಲದ ವ್ಯಕ್ತಿಯೊಬ್ಬ ವಿಚಿತ್ರವಾಗಿ ತಲೆ ಕೂದನ್ನು ಕತ್ತರಿಸಿದಾಗೆ ಕಾಣುವಂತೆ ನೆತ್ತಿಯ ಮೇಲೆ ವಿಗ್ ಧರಿಸಿಕೊಂಡು ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ್ದು, ಕೊನೆಗೆ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.
ಆರೋಪಿಯನ್ನು ಮಲಪ್ಪುರಂನ ನೌಶಾದ್ ಎಂದು ಗುರುತಿಸಲಾಗಿದೆ. ಆರೋಪಿ ನೌಶಾದ್ ಯುಎಇಯ ಶಾರ್ಜಾದಿಂದ ವಿಮಾನ ನಿಲ್ದಾಣಕ್ಕೆ ಬಂದಿದ್ದನು. ಈತ ನೆತ್ತಿಯ ಮಧ್ಯದ ಸುತ್ತ ಕೂದಲನ್ನು ಬೋಳಿಸಿಕೊಂಡ ರೀತಿ, ತಲೆಯ ಮಧ್ಯ ಭಾಗದಲ್ಲಿ ವಿಗ್ ಅಡಿಯಲ್ಲಿ 1.13 ಕೆಜಿ ಚಿನ್ನವನ್ನು ಸಾಗಾಟ ಮಾಡಲು ಯತ್ನಿಸಿದ್ದನು.
Advertisement
Advertisement
ಕೊಚ್ಚಿನ್ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ (ಸಿಐಎಎಲ್)ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಆತನ ವಿಗ್ ನೋಡಿ ಅನುಮಾನಗೊಂಡು ಪರಿಶೀಲಿಸಿದ್ದಾರೆ. ನಂತರ ಆತನನ್ನು ವಶಕ್ಕೆ ಪಡೆದು ಪರಿಶೀಲನೆ ಮಾಡಿದ್ದಾರೆ. ಆಗ ಆತನ ತಲೆ ಮೇಲಿದ್ದ ವಿಗ್ ಕೆಳಗೆ 1.13 ಕೆಜಿ ಚಿನ್ನ ಪತ್ತೆಯಾಗಿದೆ. ಚಿನ್ನವು ಪೇಸ್ಟ್ ರೀತಿಯಲ್ಲಿ ಪತ್ತೆಯಾಗಿದೆ. ತಕ್ಷಣ ಆತನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
Advertisement
ಈ ಹಿಂದೆ ಕಳ್ಳಸಾಗಾಣಿಕೆದಾರರು ತಮ್ಮ ದೇಹದ ವಿವಿಧ ಭಾಗಗಳಲ್ಲಿ ಕಳ್ಳಸಾಗಾಣೆ ಮಾಡುತ್ತಿದ್ದರು. ಆದರೆ ಇದೇ ಮೊದಲ ಬಾರಿಗೆ ಈ ರೀತಿ ವಿಗ್‍ನಲ್ಲಿ ಚಿನ್ನವನ್ನು ಇಟ್ಟುಕೊಂಡು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಸದ್ಯಕ್ಕೆ ಆರೋಪಿಯನ್ನು ಬಂಧಿಸಿ, ತನಿಖೆಯನ್ನು ಮುಂದುವರಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.