ಕಾಠ್ಮಂಡು: ನೇಪಾಳದ (Nepal) ರಾಜಧಾನಿ ಕಾಠ್ಮಂಡುವಿನಲ್ಲಿರುವ (Kathmandu) ವಿಶ್ವವಿಖ್ಯಾತ ಪಶುಪತಿನಾಥ ದೇವಸ್ಥಾನದಲ್ಲಿ (Pashupatinath Temple) 10 ಕೆಜಿ ಚಿನ್ನ (Gold) ಕಳ್ಳತನವಾಗಿದೆ. ಇದನ್ನು ತನಿಖೆ ನಡೆಸಲು ಅಧಿಕಾರಿಗಳು ದೇವಾಲಯವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದು ಸಾರ್ವಜನಿಕರ ಪ್ರವೇಶಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.
ಕಳೆದ ವರ್ಷ ಶಿವರಾತ್ರಿ ಹಬ್ಬದ ಆಚರಣೆ ವೇಳೆ ಗರ್ಭಗುಡಿಯಲ್ಲಿರುವ ಶಿವಲಿಂಗದ ಸುತ್ತ 103 ಕೇಜಿ ಚಿನ್ನದ ಜಲಹರಿಯನ್ನು ನಿರ್ಮಿಸಲಾಗಿತ್ತು. ಇದರಲ್ಲಿ 10 ಕೆಜಿ ಚಿನ್ನ ಕಾಣೆಯಾಗಿದೆ ಎಂದು ದೂರಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಬೆಂಗಳೂರಿನಲ್ಲಿ ಬೀಳಲಿದೆ ಮಳೆ – ಭಾನುವಾರ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
- Advertisement
ನೇಪಾಳದ ಉನ್ನತ ತನಿಖಾ ಸಂಸ್ಥೆ ಸಿಐಎಎ ಈ ಪ್ರಕರಣದ ತನಿಖೆ ಆರಂಭಿಸಿದೆ. ಭಾನುವಾರ ಮಧ್ಯಾಹ್ನದಿಂದಲೇ ಭಕ್ತರಿಗೆ ದೇವಾಲಯ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ನಾನು ಸಾವರ್ಕರ್ ವಂಶಸ್ಥ, ನನ್ನನ್ನ ಜೈಲಿಗೆ ಹಾಕ್ತೀರಾ – ಎಂಬಿಪಿಗೆ ಸೂಲಿಬೆಲೆ ಪ್ರಶ್ನೆ