30 ಲಕ್ಷದ ಚಿನ್ನವನ್ನು ಗುದನಾಳ, ವಿಗ್‌ನಲ್ಲಿ ಬಚ್ಚಿಟ್ಟುಕೊಂಡಿದ್ದ ಕಿಲಾಡಿ ಕಳ್ಳನ ಬಂಧನ

Public TV
1 Min Read
GOLD SMUGGLING IN WIG

ನವದೆಹಲಿ: ಜಗತ್ತಿನಾದ್ಯಂತ ಕಳ್ಳಸಾಗಣೆದಾರರು ಆಗಾಗ ತಮ್ಮ ಕೈಚಳಕ ಪ್ರದರ್ಶಿಸುತ್ತಿದ್ದಾರೆ. ಆದರೆ, ಪೊಲೀಸರು ಇದಕ್ಕೆ ನಾವೇನು ಕಡಿಮೆಯಿಲ್ಲ ಎನ್ನುವಂತೆ ಹೆಡೆಮುರಿಕಟ್ಟುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಆದರೂ, ಕೆಲ ಮಾದಕ ವಸ್ತು, ಚಿನ್ನಾಭರಣ ಕಳ್ಳಸಾಗಣೆ ಮಾಡುವವರು ಅಕ್ರಮ ವಸ್ತುಗಳನ್ನು ಮತ್ತೊಂದು ಸ್ಥಳಕ್ಕೆ ಕೊಂಡೊಯ್ಯಲು ವಿನೂತನ ಮಾರ್ಗಗಳನ್ನು ಅನುಸರಿಸುತ್ತಾರೆ. ತಮ್ಮ ದೇಹದ ಭಾಗಗಳಲ್ಲೂ ಅವುಗಳನ್ನು ಬಚ್ಚಿಟ್ಟುಕೊಂಡು ಕೊಂಡೊಯ್ಯುತ್ತಾರೆ.

CRIME 2

ಅದೇ ರೀತಿಯ ಘಟನೆಯೊಂದನ್ನು ನವದೆಹಲಿಯ ಇಂದಿರಾಗಾಂಧಿ ಇಂಟರ್‌ನ್ಯಾಶನಲ್ (ಎಲ್‌ಎಫ್‌ಟಿ) ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭೇದಿಸಿದ್ದಾರೆ. ವ್ಯಕ್ತಿಯೊಬ್ಬ ತನ್ನ ವಿಗ್ ಮತ್ತು ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ 30.55 ಲಕ್ಷ ರೂ. ಮೌಲ್ಯದ ಚಿನ್ನ (630.45 ಗ್ರಾಂ) ವನ್ನು ವಶಪಡಿಸಿಕೊಂಡಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಇದನ್ನೂ ಓದಿ: ಗಾಂಧೀಜಿ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದ ಬ್ರಿಟನ್ ಪ್ರಧಾನಿ

ಅಬುಧಾಬಿಯಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವ್ಯಕ್ತಿಯ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು 3ನೇ ಟರ್ಮಿನಲ್‌ನಲ್ಲಿ ತಡೆದು, ಪರಿಶೀಲಿಸಿದ್ದಾರೆ. ಈ ವೇಳೆ ಆಸಾಮಿ ತನ್ನ ವಿಗ್‌ನಲ್ಲಿ ವಿಗ್‌ನಲ್ಲಿ ಹಾಗೂ ಗುದನಾಳದಲ್ಲಿ ಬಚ್ಚಿಟ್ಟಿದ್ದ ಚಿನ್ನ ಪತ್ತೆಯಾಗಿದೆ. ನಂತರ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವರದಿ ಹೇಳಿದೆ.

Share This Article
Leave a Comment

Leave a Reply

Your email address will not be published. Required fields are marked *