ಬೆಂಗಳೂರು: ಕರ್ನಾಟಕ ಸಂಭ್ರಮ ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾಧಕರಿಗೆ ಪ್ರಶಸ್ತಿ ಮೊತ್ತ 50 ಸಾವಿರದಿಂದ 1 ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಘೋಷಣೆ ಮಾಡಿದ್ದಾರೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ 50 ಮಹಿಳಾ ಸಾಧಕಿಯರು ಹಾಗೂ 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದೆ. ಪ್ರಶಸ್ತಿ ಮೊತ್ತವನ್ನು ಈಗಾಗಲೇ 50,000 ಎಂದು ತಿಳಿಸಲಾಗಿತ್ತು. ಇದೊಂದು ಐತಿಹಾಸಿಕ ಸಂದರ್ಭವಾಗಿರುವುದರಿಂದ ಈ ಪ್ರಶಸ್ತಿ ಮೊತ್ತವನ್ನು 50,000 ದಿಂದ ರೂ.1ಲಕ್ಷಗಳಿಗೆ ಹೆಚ್ಚಿಸುವುದು ಸೂಕ್ತವೆಂದು ಸರ್ಕಾರ ಅಭಿಪ್ರಾಯ ಪಟ್ಟಿದೆ. ಹಾಗಾಗಿ ಪ್ರಶಸ್ತಿ ಮೊತ್ತವನ್ನು 1 ಲಕ್ಷ ರೂಪಾಯಿ ಎಂದು ಘೋಷಿಸಲು ಹರ್ಷಿಸುತ್ತೇನೆ ಹೇಳಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ; ಗೋಡೌನ್‌ನಲ್ಲಿ ಶೇಖರಿಸಿಟ್ಟಿದ್ದ ಬಂಡಲ್‌ಗಟ್ಟಲೇ ಸೀರೆ, ಪಂಚೆ ಜಪ್ತಿ
Advertisement
Advertisement
ಇದಕ್ಕೆ ಕಾರಣಕರ್ತರಾದ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಹ ತಿಳಿಸಿದ್ದಾರೆ. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಸಾಗಿಸುತ್ತಿದ್ದ ‘ಈರುಳ್ಳಿ ಬಾಂಬ್’ ಸ್ಫೋಟಗೊಂಡು ಓರ್ವ ಸಾವು
Advertisement